ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕರ್ತವ್ಯ ವೇಳೆ ಮೃತಪಟ್ಟ ನೌಕರರ ಕುಟುಂಬಕ್ಕೆ ತಲಾ 20 ಲಕ್ಷ ರೂಪಾಯಿ ಪರಿಹಾರ ಬಿಡುಗಡೆ ಮಾಡಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಕಾರ್ಯದರ್ಶಿ ಆದೇಶಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಸಹ ಶಿಕ್ಷಕಿ ದಾನಮ್ಮ ನಂದರಗಿ ಅವರು ಅಕ್ಟೋಬರ್ 3ರಂದು ಸಮೀಕ್ಷೆ ಮುಗಿಸಿ ವಾಪಸ್ ಬರುವಾಗ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಸೆ. 28ರಂದು ಚಿಕ್ಕಬಳ್ಳಾಪುರ ಜಿಲ್ಲೆಯ ಸಹ ಶಿಕ್ಷಕ ವೈ.ವಿ. ರಾಮಕೃಷ್ಣಪ್ಪ ಅವರು ಸಮೀಕ್ಷೆ ಕಾರ್ಯದ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದರು.
ಮೃತರ ಕುಟುಂಬಕ್ಕೆ ತಲಾ 20 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದರು. ಅಂತೆಯೇ ಇಬ್ಬರು ಮೃತರ ಕುಟುಂಬದವರಿಗೆ ತಲಾ 20 ಲಕ್ಷ ರೂಪಾಯಿ ಪರಿಹಾರ ಬಿಡುಗಡೆ ಮಾಡಿ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಕಾರ್ಯದರ್ಶಿ ಆದೇಶಿಸಿದ್ದಾರೆ.