HomeKarnatakaಮಹಾ ಕುಂಭಮೇಳ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ

ಮಹಾ ಕುಂಭಮೇಳ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ

ಬೆಳಗಾವಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ ಬೆಳಗಾವಿಯ ನಾಲ್ವರ ಕುಟುಂಬದವರಿಗೆ ಉತ್ತರ ಪ್ರದೇಶ ಸರ್ಕಾರ ತಲಾ 25 ಲಕ್ಷ ರೂಪಾಯಿ ಪರಿಹಾರ ಬಿಡುಗಡೆ ಮಾಡಿದೆ.

ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಪ್ರಯಾಗ್ ರಾಜ್ ಜಿಲ್ಲಾಧಿಕಾರಿ ರವಿ ಮಂದಾರ್ ಅವರೊಂದಿಗೆ ಮಾತುಕತೆ ನಡೆಸಿದ್ದು, ಮಹಾ ಕುಂಭಮೇಳದಲ್ಲಿ ಕಾಲ್ತುಳಿತದಲ್ಲಿ ಮೃತಪಟ್ಟ ಜ್ಯೋತಿ ಹತ್ತರವಾಟ, ಮೇಘ ಹತ್ತರವಾಟ, ಮಹಾದೇವಿ ಭಾವನೂರ, ಅರುಣ ಕೋಪರ್ಡೆ ಅವರ ಕುಟುಂಬದವರ ಖಾತೆಗಳಿಗೆ ನೇರವಾಗಿ ಪರಿಹಾರ ಹಣ ಜಮಾ ಮಾಡಲಾಗಿದೆ. ಗ್ರಾಮ ಲೆಕ್ಕಾಧಿಕಾರಿ ಮೂಲಕ ಪರಿಶೀಲಿಸಲಾಗಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular