HomeLatest News22 ದಿನದಲ್ಲಿ ಸಂಚಾರ ನಿಯಮ ಉಲ್ಲಂಘನೆ ದಂಡ ರಿಯಾಯಿತಿಯಡಿ 28.35 ಕೋಟಿ ರೂ. ವಸೂಲಿ

22 ದಿನದಲ್ಲಿ ಸಂಚಾರ ನಿಯಮ ಉಲ್ಲಂಘನೆ ದಂಡ ರಿಯಾಯಿತಿಯಡಿ 28.35 ಕೋಟಿ ರೂ. ವಸೂಲಿ

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡಪಾವತಿಗೆ ನೀಡಲಾಗಿದ್ದ ಶೇಕಡ 50ರಷ್ಟು ರಿಯಾಯಿತಿ ಗಡುವು ಶುಕ್ರವಾರಕ್ಕೆ ಮುಕ್ತಾಯವಾಗಿದೆ. 22 ದಿನಗಳಲ್ಲಿ ಒಟ್ಟು 28.35 ಕೋಟಿ ರೂ. ದಂಡ ಪಾವತಿಯಾಗಿದೆ.

ಪೊಲೀಸ್ ಇಲಾಖೆಯಲ್ಲಿನ ಸಂಚಾರಿ ಇ- ಚಲನ್ ನಲ್ಲಿ ದಾಖಲಾದ ಪ್ರಕರಣಗಳಲ್ಲಿ ಬಾಕಿ ಉಳಿಸಿಕೊಂಡ ಹಳೆ ಪ್ರಕರಣಗಳ ದಂಡ ಪಾವತಿಗೆ ಶೇಕಡ 50ರಷ್ಟು ರಿಯಾಯಿತಿಯನ್ನು ಸರ್ಕಾರ ನವೆಂಬರ್ 21ರಿಂದ ಡಿಸೆಂಬರ್ 12ರ ವರೆಗೆ ನೀಡಿತ್ತು.

ಕಡೆಯ ದಿನವಾದ ಶುಕ್ರವಾರದವರೆಗೂ ಎಲ್ಲ ವಿಧಾನಗಳ ಮೂಲಕ ಒಟ್ಟು 10.20.043 ಪ್ರಕರಣಗಳು ಇತ್ಯರ್ಥವಾಗಿದ್ದು, 28,35,26,900 ರೂ. ದಂಡ ಪಾವತಿಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular