BREAKING : ‘ ದೇವ್ರಾಣೆ.. ನಾವ್ 3 ಲಕ್ಷ ಹಣ ಕದ್ದಿಲ್ಲ’ : ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆ ಕೆಲಸದವರ ಹೇಳಿಕೆ.!


ಬೆಂಗಳೂರು : ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ನಗದು ಕಳ್ಳತನವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಿಜಯಲಕ್ಷ್ಮಿ ಮನೆಯ ಕೆಲಸದವರನ್ನು ಅಚ್ಚುಕಟ್ಟು ಠಾಣೆ  ಪೊಲೀಸರು
ವಿಚಾರಣೆ ನಡೆಸಿದ್ದಾರೆ.

ಪೊಲೀಸರ ವಿಚಾರಣೆ ವೇಳೆ ಕೆಲಸದವರು ‘ದೇವ್ರಾಣೆ ನಾವ್ ಕದ್ದಿಲ್ಲ’ ಎಂದು ಹೇಳಿದ್ದಾರೆ ಎನ್ನಲಾಗಿದೆ. ಕಳ್ಳತನವಾದ ದಿನ ಫ್ಲಾಟ್ ನಲ್ಲಿ ವಿಜಯಲಕ್ಷ್ಮಿ ತಾಯಿ ಸೇರಿ ಐವರು ಇದ್ದರು. ಫ್ಲಾಟ್ ಒಳಗೆ ಸಿಸಿ ಕ್ಯಾಮೆರಾ ಇರಲಿಲ್ಲ, ಆದರೆ ಗಾರ್ಡನ್ ಏರಿಯಾ ಬಳಿ, ಸೆಕ್ಯೂರಿಟಿ, ಲಿಫ್ಟ್ ಬಳಿ ಮಾತ್ರ ಸಿಸಿಟಿವಿಯಿತ್ತು. ಇದನ್ನು ಪರಿಶೀಲನೆ ನಡೆಸಿದಾಗ ಮನೆ ಒಳಗೆ ಯಾರೂ ಹೋಗಿರಲಿಲ್ಲ. ಆದರೆ ಮನೆಕೆಲಸದವರು ನಾವು ಕದ್ದಿಲ್ಲ ಎಂದು ಹೇಳುತ್ತಿದ್ದಾರೆ. ಈ ಹಿನ್ನೆಲೆ ಪೊಲೀಸರು ವಿಜಯಲಕ್ಷ್ಮಿ ತಾಯಿಯಿಂದ ಮಾಹಿತಿ ಪಡೆಯಲಿದ್ದಾರೆ.

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ನಗದು ಕಳ್ಳತನವಾಗಿದ್ದು, ದೂರು ದಾಖಲಾಗಿದೆ.ನಟ ದರ್ಶನ್ ಮ್ಯಾನೇಜರ್ ನಾಗರಾಜ್ ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಗೆ ದೂರು ನೀಡಿದ್ದಾರೆ. ದುಷ್ಕರ್ಮಿಗಳು 3 ಲಕ್ಷ ನಗದು ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದಾರೆ.ವಿಜಯಲಕ್ಷ್ಮಿ ವಾಸ ಇರುವ ಹೊಸಕೆರೆಹಳ್ಳಿ ಪ್ರೆಸ್ಟೀಜ್ ಅಪಾರ್ಟ್ಮೆಂಟ್ ಫ್ಲಾಟ್ ನಲ್ಲಿ ಕಳ್ಳತನ ನಡೆದಿದೆ. 3 ಲಕ್ಷ ರೂಪಾಯಿ ಹಣ ಕಳ್ಳತನವಾಗಿರುವುದಾಗಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ .ದೂರು ನೀಡಿದ ಹಿನ್ನೆಲೆ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ. ಮನೆ ಕೆಲಸದವರ ಮೇಲೆ ಅನುಮಾನ ವ್ಯಕ್ತಪಡಿಸಿದ ಮ್ಯಾನೇಜರ್ ನಾಗರಾಜ್ ಪೊಲೀಸರಿಗೆ ದೂರು ನೀಡಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read