HomeLatest Newsಪದವಿ, ಸ್ನಾತಕೋತ್ತರ ಪದವೀಧರರಿಗೆ 3 ಸಾವಿರ ರೂ.: ಯುವನಿಧಿ ಯೋಜನೆಗೆ ಅರ್ಜಿ

ಪದವಿ, ಸ್ನಾತಕೋತ್ತರ ಪದವೀಧರರಿಗೆ 3 ಸಾವಿರ ರೂ.: ಯುವನಿಧಿ ಯೋಜನೆಗೆ ಅರ್ಜಿ

2023, 2024 ಹಾಗೂ 2025 ರಲ್ಲಿ ಪದವಿ, ಡಿಪ್ಲೋಮಾ, ಸ್ನಾತಕೋತ್ತರ ಪದವಿ ಉತ್ತೀರ್ಣರಾಗಿ 6 ತಿಂಗಳಾದರೂ ಸರ್ಕಾರಿ, ಖಾಸಗಿ, ಸ್ವಯಂ ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವಿದ್ಯಾಭ್ಯಾಸ ಮುಂದುವರೆಸದೆ ಇರುವ ವಿದ್ಯಾರ್ಥಿಗಳು ಕರ್ನಾಟಕ ಒನ್, ಗ್ರಾಮಒನ್, ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಅಥವಾ http://sevasindhugs.karnataka.gov.in ಪೋರ್ಟಲ್ ಮೂಲಕ ಉಚಿತವಾಗಿ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಬಹುದು.

ಪದವೀಧರರಿಗೆ/ ಸ್ನಾತಕೋತ್ತರ ಪದವೀಧರರಿಗೆ ಪ್ರತಿ ತಿಂಗಳು ರೂ.3 ಸಾವಿರ ಹಾಗೂ ಡಿಪ್ಲೋಮಾ ಪಡೆದವರಿಗೆ ರೂ.1500 ಗಳನ್ನು ನಿರುದ್ಯೋಗ ಭತ್ಯೆಯನ್ನಾಗಿ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳವರೆಗೆ ನೀಡಲಾಗುತ್ತದೆ ಮತ್ತು ಈಗಾಗಲೇ ನೋಂದಾಯಿಸಿಕೊಂಡು ಹಣ ಪಡೆಯತ್ತಿರುವ ಫಲಾನುಭವಿಗಳು ಪ್ರತಿ ತಿಂಗಳಿಗೊಮ್ಮೆ ಸ್ವಯಂ ಘೋಷಣೆ ಮಾಡಿಕೊಳ್ಳಬೇಕಿದೆ.

ಹಾಗೆಯೇ ಯುವನಿಧಿ ಪ್ಲಸ್‍ಯಡಿ ಉಚಿತ ಕೌಶಲ್ಯ ತರಬೇತಿ ಕಾರ್ಯಕ್ರಮಕ್ಕೆ ಹಾಜರಾಗುವುದು. ಉಚಿತ ಕೌಶಲ್ಯ ತರಬೇತಿಯನ್ನು ಪಡೆಯಲು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವೆಬ್‍ಸೈಟ್ https://www.kaushalkar.com/app/registration_ver ನ್ನು ಕ್ಲಿಕ್ ಮಾಡಿ ಹೆಸರು ನೋಂದಾಯಿಸಿಕೊಳ್ಳುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 1800–599-7154 ಗೆ ಕರೆ ಮಾಡುವ ಮೂಲಕ ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ, ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಕಚೇರಿ ವೇಳೆಯಲ್ಲಿ ಖುದ್ದಾಗಿ ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಉದ್ಯೋಗಾಧಿಕಾರಿ ಮಂಜುನಾಥ್ ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular