HomeLatest Newsಮದ್ರಸಾಗಳಲ್ಲಿ ಲೌಕಿಕ ಶಿಕ್ಷಣಕ್ಕೆ 35 ಕೋಟಿ ರೂ.: ಕೆಪಿಎಸ್ ಮಾದರಿಯಲ್ಲಿ 100 ಉರ್ದು ಶಾಲೆಗಳ ಅಭಿವೃದ್ಧಿ:...

ಮದ್ರಸಾಗಳಲ್ಲಿ ಲೌಕಿಕ ಶಿಕ್ಷಣಕ್ಕೆ 35 ಕೋಟಿ ರೂ.: ಕೆಪಿಎಸ್ ಮಾದರಿಯಲ್ಲಿ 100 ಉರ್ದು ಶಾಲೆಗಳ ಅಭಿವೃದ್ಧಿ: ಸಚಿವ ಜಮೀರ್ ಅಹ್ಮದ್ ಖಾನ್

ಬೆಂಗಳೂರು: ಅಲ್ಪಸಂಖ್ಯಾತರ ಬಾಹುಳ್ಯದ ಪ್ರದೇಶಗಳಲ್ಲಿ ಕರ್ನಾಟಕ ಪಬ್ಲಿಕ್‌ ಸ್ಕೂಲ್‌(ಕೆಪಿಎಸ್‌) ಮಾದರಿಯಲ್ಲಿ 100 ಉರ್ದು ಶಾಲೆಗಳನ್ನು ಅಭಿವೃದ್ಧಿಪಡಿಸಲು ಬಜೆಟ್‌ನಲ್ಲಿ 500 ಕೋಟಿ ರೂ. ಮೀಸಲಿಡಲಾಗಿದೆ. ರಾಜ್ಯ ಅಲ್ಪ ಸಂಖ್ಯಾತರ ಆಯೋಗದ ಜೊತೆ ಸೇರಿ ಸರ್ವೇ ಮಾಡಿ ಅಗತ್ಯವಿರುವ ಕಡೆ ಶಾಲೆಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಜಮೀರ್‌ ಅಹ್ಮದ್‌ ಖಾನ್‌ ತಿಳಿಸಿದ್ದಾರೆ.

ಅಲ್ಪಸಂಖ್ಯಾತರು ಹೆಚ್ಚಾಗಿರುವ ಪ್ರದೇಶಗಳಲ್ಲಿ ಕೆಪಿಎಸ್ ಮಾದರಿಯಲ್ಲಿ 100 ಶಾಲೆಗಳನ್ನು ಅಭಿವೃದ್ಧಿಪಡಿಸಲು ಬಜೆಟ್ ನಲ್ಲಿ 500 ಕೋಟಿ ರೂ. ಮೀಸಲಿಡಲಾಗಿದ್ದು, ರಾಜ್ಯ ಅಲ್ಪಸಂಖ್ಯಾತರ ಆಯೋಗದ ಜೊತೆಗೆ ಸರ್ವೇ ನಡೆಸಿ ಅಗತ್ಯವಿರುವ ಕಡೆ ಶಾಲೆಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು ಮಾಹಿತಿ ನೀಡಿದ್ದಾರೆ.

ಅದೇ ರೀತಿ ಮದ್ರಸಾಗಳಲ್ಲಿ ಮಕ್ಕಳಿಗೆ ಲೌಕಿಕ ಶಿಕ್ಷಣ ಒದಗಿಸಲು 35 ಕೋಟಿ ರೂ. ಕಾಯ್ದಿರಿಸಲಾಗಿದೆ. ಮೌಲಾನ ಆಜಾದ್ ಮತ್ತು ಮೊರಾರ್ಜಿ ದೇಸಾಯಿ ಶಾಲೆಗಳಲ್ಲಿ ಫಲಿತಾಂಶ ಸುಧಾರಣೆಗೆ ಇನ್ನಷ್ಟು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular