ಬೆಂಗಳೂರು: ರಾಜ್ಯದ ವಿವಿಧ ಪಟ್ಟಣಗಳಲ್ಲಿ ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ವಾಸವಾಗಿರುವ ಪ್ರದೇಶಗಳನ್ನು ಮಾದರಿ ಕಾಲೋನಿಗಳಾಗಿ ಅಭಿವೃದ್ಧಿ ಪಡಿಸಲು ಸರ್ಕಾರ ಮುಂದಾಗಿದೆ.
ಒಟ್ಟು 398 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಪ್ರಸ್ತಾವನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡುವ ಸಾಧ್ಯತೆ ಇದೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ವಿವಿಧ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಪ್ರದೇಶಗಳನ್ನು ಮಾದರಿ ಕಾಲೋನಿಗಳಾಗಿ ಅಭಿವೃದ್ಧಿ ಪಡಿಸಲು ಕಾಮಗಾರಿ ಕೈಗೊಳ್ಳಲು ಉದ್ದೇಶಿಸಿದ್ದು, ಸಂಪುಟ ಸಭೆಯಲ್ಲಿ ಅನುಮೋದನೆ ನೀಡುವ ಸಾಧ್ಯತೆ ಇದೆ.
ಮುಖ್ಯಮಂತ್ರಿ ಅವರ ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿ ಯೋಜನೆ ಬಗ್ಗೆ ಈ ಬಾರಿ ಬಜೆಟ್ ನಲ್ಲಿ ಘೋಷಿಸಲಾಗಿದ್ದು, ಮೊದಲ ಹಂತದಲ್ಲಿ 398 ಕೋಟಿ ರೂಪಾಯಿ ಒದಗಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಮಂಡಿಸಲಾಗುವುದು.