HomeLatest Newsಅಲ್ಪಸಂಖ್ಯಾತರು ಹೆಚ್ಚಾಗಿರುವ ಪ್ರದೇಶಗಳ ಅಭಿವೃದ್ಧಿಗೆ 398 ಕೋಟಿ ರೂ.: ಇಂದು ಸಂಪುಟ ಸಭೆಯಲ್ಲಿ ಅನುಮೋದನೆ ಸಾಧ್ಯತೆ

ಅಲ್ಪಸಂಖ್ಯಾತರು ಹೆಚ್ಚಾಗಿರುವ ಪ್ರದೇಶಗಳ ಅಭಿವೃದ್ಧಿಗೆ 398 ಕೋಟಿ ರೂ.: ಇಂದು ಸಂಪುಟ ಸಭೆಯಲ್ಲಿ ಅನುಮೋದನೆ ಸಾಧ್ಯತೆ

ಬೆಂಗಳೂರು: ರಾಜ್ಯದ ವಿವಿಧ ಪಟ್ಟಣಗಳಲ್ಲಿ ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ವಾಸವಾಗಿರುವ ಪ್ರದೇಶಗಳನ್ನು ಮಾದರಿ ಕಾಲೋನಿಗಳಾಗಿ ಅಭಿವೃದ್ಧಿ ಪಡಿಸಲು ಸರ್ಕಾರ ಮುಂದಾಗಿದೆ.

ಒಟ್ಟು 398 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಪ್ರಸ್ತಾವನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡುವ ಸಾಧ್ಯತೆ ಇದೆ.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ವಿವಿಧ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಪ್ರದೇಶಗಳನ್ನು ಮಾದರಿ ಕಾಲೋನಿಗಳಾಗಿ ಅಭಿವೃದ್ಧಿ ಪಡಿಸಲು ಕಾಮಗಾರಿ ಕೈಗೊಳ್ಳಲು ಉದ್ದೇಶಿಸಿದ್ದು, ಸಂಪುಟ ಸಭೆಯಲ್ಲಿ ಅನುಮೋದನೆ ನೀಡುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಖ್ಯಮಂತ್ರಿ ಅವರ ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿ ಯೋಜನೆ ಬಗ್ಗೆ ಈ ಬಾರಿ ಬಜೆಟ್ ನಲ್ಲಿ ಘೋಷಿಸಲಾಗಿದ್ದು, ಮೊದಲ ಹಂತದಲ್ಲಿ 398 ಕೋಟಿ ರೂಪಾಯಿ ಒದಗಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಮಂಡಿಸಲಾಗುವುದು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular