ಬೆಂಗಳೂರು: ಮಳೆ ಅವಘಡದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ ಐದು ಲಕ್ಷ ರೂ. ಪರಿಹಾರ ನೀಡುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಳೆಯಿಂದ ವಿದ್ಯುತ್ ಅವಘಡದಲ್ಲಿ ಎಂಎಸ್ ಪಾಳ್ಯದ ಮನಮೋಹನ ಕಾಮತ್ ಮತ್ತು ದಿನೇಶ್ ಮೃತಪಟ್ಟ ಸ್ಥಳಕ್ಕೆ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದ ಡಿಸಿಎಂ ಕುಟುಂಬದವರಿಗೆ ಸಾಂತ್ವಾನ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಡರ್ ಗ್ರೌಂಡ್ ನಲ್ಲಿ ಸಂಗ್ರಹವಾಗಿದ್ದ ನೀರನ್ನು ಪಂಪ್ ಮೂಲಕ ಖಾಲಿ ಮಾಡುವಾಗ ಅಧಿಕಾರಿಗಳು, ಪೊಲೀಸ್ ಹಾಗೂ ಸಹಾಯ ಮಾಡಲು ಬಂದವರಿಗೆ ವಿದ್ಯುತ್ ಶಾಕ್ ನಿಂದ ಆಘಾತವಾಗಿದೆ. ಈ ವೇಳೆ ಮೃತಪಟ್ಟ ನಾಗರಿಕರಿಗೆ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಜಾನುವಾರುಗಳು ಕೂಡ ಮೃತಪಟ್ಟಿದ್ದು, ಪರಿಹಾರ ನೀಡಲಾಗುವುದು. ತಗ್ಗು ಪ್ರದೇಶಗಳಲ್ಲಿ ಅಂಡರ್ ಗ್ರೌಂಡ್ ನಿರ್ಮಾಣ ಮಾಡಿ ವಾಹನ ನಿಲ್ದಾಣಕ್ಕೆ ಅವಕಾಶ ನೀಡದಂತೆ ಭವಿಷ್ಯದಲ್ಲಿ ಕಾನೂನು ರೂಪಿಸಲಾಗುತ್ತಿದೆ. ಈ ಬಗ್ಗೆ ಮಳೆಯ ಕಡಿಮೆಯಾದ ನಂತರ ಕಾರ್ಯಸೂಚಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಮಳೆ ಬಾಧಿತ ಬಿಟಿಎಮ್ ಲೇಔಟ್ ಗೆ ಭೇಟಿ ನೀಡಿ, ಎನ್.ಎಸ್.ಪಾಳ್ಯದಲ್ಲಿ ಪರಿಸ್ಥಿತಿ ಅವಲೋಕಿಸಿದೆ. ಮಧುವನ್ ಅಪಾರ್ಟ್ ಮೆಂಟ್ ನಲ್ಲಿ ಮಳೆಯಿಂದಾಗಿ ವಿದ್ಯುತ್ ಪ್ರವಹಿಸಿ ಮನಮೋಹನ್ ಕಾಮತ್ ಹಾಗೂ ದಿನೇಶ್ ಎನ್ನುವವರು ಮೃತರಾಗಿದ್ದು ದುರ್ದೈವ. ಅವರ ಕುಟುಂಬಸ್ಥರನ್ನು ಭೇಟಿಯಾಗಿ, ಸಾಂತ್ವನ ತಿಳಿಸಿದ್ದೇನೆ.
— DK Shivakumar (@DKShivakumar) May 20, 2025
ಮಳೆಯಿಂದ ಉಂಟಾದ ಅನಾಹುತಗಳ ಅವಲೋಕನ ಹಾಗೂ… pic.twitter.com/qCxzNm14Fp