HomeKarnatakaಹಾಡಹಗಲೇ ಮನೆ ಬೀಗ ಮುರಿದು 5 ಲಕ್ಷ ರೂ. ನಗದು, 500 ಗ್ರಾಂ ಚಿನ್ನ ಕಳವು

ಹಾಡಹಗಲೇ ಮನೆ ಬೀಗ ಮುರಿದು 5 ಲಕ್ಷ ರೂ. ನಗದು, 500 ಗ್ರಾಂ ಚಿನ್ನ ಕಳವು

ಯಾದಗಿರಿ: ಹಾಡಹಗಲೇ ಮನೆಯಲ್ಲಿದ್ದ 500 ಗ್ರಾಂ ಚಿನ್ನ, 5 ಲಕ್ಷ ರೂಪಾಯಿ ನಗದು ಕಳವು ಮಾಡಿದ ಘಟನೆ ಯಾದಗಿರಿ ನಗರದ ವಾಲ್ಮೀಕಿ ಭವನದ ಬಳಿ ನಡೆದಿದೆ.

ರಾಘವೇಂದ್ರ ಕಟ್ಟಿಮನಿ ಎಂಬುವರಿಗೆ ಸೇರಿದ ಮನೆಯಲ್ಲಿ ಕಳ್ಳತನ ಮಾಡಲಾಗಿದೆ. ಮಕ್ಕಳನ್ನು ಶಾಲೆಗೆ ಸೇರಿಸಲು ಮನೆಯವರು ಕಲಬುರಗಿಗೆ ತೆರಳಿದ್ದಾಗ ಕಳ್ಳರು ಕೃತ್ಯವೆಸಗಿದ್ದಾರೆ. ಮನೆಯ ಬೀಗ ಒಡೆದು ಎರಡು ಬೆಡ್ರೂಮ್ ಗಳಲ್ಲಿದ್ದ ಚಿನ್ನ ಮತ್ತು ನಗದು ದೋಚಲಾಗಿದೆ.

ಲಾಕರ್ ಸಮೇತ ಚಿನ್ನಾಭರಣ ಹಾಗೂ ನಗದನ್ನು ಕಳ್ಳರು ಕದ್ದೊಯ್ದಿದ್ದಾರೆ. ಇಬ್ಬರು ಕಳ್ಳರು ಓಡಾಡುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular