50 ಲಕ್ಷ ರೂ. ಕೊಡುವಂತೆ ಸಚಿವ ಆನಂದ್ ಸಿಂಗ್ ಗೆ ಬ್ಲ್ಯಾಕ್ ಮೇಲ್

ಹೊಸಪೇಟೆ: 50 ಲಕ್ಷ ರೂ. ಕೊಡುವಂತೆ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಪ್ರಜಾ ಸೇನೆ ರಾಜ್ಯ ಘಟಕದ ಅಧ್ಯಕ್ಷ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಮಾತನಾಡಿದ ಸಚಿವ ಆನಂದ್ ಸಿಂಗ್, ಕರ್ನಾಟಕ ರಕ್ಷಣಾ ವೇದಿಕೆ ಪ್ರಜಾ ಸೇನೆ ರಾಜ್ಯ ಘಟಕದ ಅಧ್ಯಕ್ಷ ಕೆ.ಆರ್. ಕುಮಾರಸ್ವಾಮಿ 50 ಲಕ್ಷ ರೂಪಾಯಿಗೆ ಬ್ಲ್ಯಾಕ್ಮೇಲ್ ಮಾಡುತ್ತಿದ್ದು, ಅವರು ಕೇಳಿದಷ್ಟು ಹಣ ಕೊಡದ ಕಾರಣ ನನ್ನ ಪುತ್ರ ಸಿದ್ದಾರ್ಥ ಸಿಂಗ್ ವಿರುದ್ಧ ಸರ್ಕಾರಿ ಜಮೀನು ಕಬಳಿಕೆ ಮಾಡಿದ ಆರೋಪ ಮಾಡಲಾಗಿದೆ ಎಂದರು.

ನನ್ನ ಪುತ್ರ ಅವರ ವಿರುದ್ಧ ಮಾನನಷ್ಟ ಕ್ರಿಮಿನಲ್ ಮೊಕದ್ದಮೆ ಹೂಡಲು ನಿರ್ಧರಿಸಿದ್ದಾನೆ. ದೇವಾಲಯಕ್ಕೆ ಸೇರಿದ 180 ಎಕರೆ ಇನಾಮು ಜಮೀನನ್ನು 11 ಜನ ಕಬಳಿಸಿರುವುದಾಗಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ನನ್ನ ಮಗ ಸಿದ್ದಾರ್ಥ ಸಿಂಗ್ ಮತ್ತು ಬಾಮೈದ ಧರ್ಮೇಂದ್ರ ಸಿಂಗ್ ಅವರ ಹೆಸರಿದೆ. ಇತರೆ 9 ಜನ ಯಾರೆಂಬುದು ನನಗೆ ಗೊತ್ತಿಲ್ಲ ಎಂದು ತಿಳಿಸಿದ್ದಾರೆ.

ಸಚಿವರ ಆರೋಪವನ್ನು ಅಲ್ಲಗಳೆದ ಕೆ.ಆರ್. ಕುಮಾರಸ್ವಾಮಿ ಅವರು, ನಾನು ಸಚಿವರಿಗೆ ಬ್ಲ್ಯಾಕ್ ಮೇಲ್ ಮಾಡಿಲ್ಲ. ಇದೆಲ್ಲವೂ ಶುದ್ಧ ಸುಳ್ಳು. ನಾನೇ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read