HomeAgricultureರೈತರ ಖಾತೆಗೆ 6 ಸಾವಿರ ರೂ.: ಪಿಎಂ ಕಿಸಾನ್ ಸಮ್ಮಾನ್ ಯೋಜನೆ ನೋಂದಣಿ ವಿಶೇಷ ಅಭಿಯಾನ

ರೈತರ ಖಾತೆಗೆ 6 ಸಾವಿರ ರೂ.: ಪಿಎಂ ಕಿಸಾನ್ ಸಮ್ಮಾನ್ ಯೋಜನೆ ನೋಂದಣಿ ವಿಶೇಷ ಅಭಿಯಾನ

ಭಾರತ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೊಳಿಸಿದ್ದು, ಯೋಜನೆಯ ಮಾರ್ಗಸೂಚಿಯಂತೆ ಭೂ ಒಡೆತನ ಹೊಂದಿರುವ ಪ್ರತಿ ಅರ್ಹ ರೈತರ ಕುಟುಂಬಕ್ಕೆ ಕೇಂದ್ರ ಸರ್ಕಾರದಿಂದ ಒಂದು ವರ್ಷಕ್ಕೆ 6000 ರೂ. ಪ್ರತಿ 4 ತಿಂಗಳಿಗೊಮ್ಮೆ 3 ಕಂತುಗಳಲ್ಲಿ ನೀಡಲಾಗುತ್ತಿದೆ.

ಸಾಗುವಳಿ ಭೂಮಿ ಹೊಂದಿರುವ ಎಲ್ಲಾ ಅರ್ಹ ರೈತರನ್ನು ಈ ಯೋಜನೆಯ ವ್ಯಾಪ್ತಿಗೆ ತರಲು ಫೆ. 12 ರಿಂದ 21 ರವರೆಗೆ 10 ದಿನಗಳ ರಾಷ್ಟ್ರವ್ಯಾಪಿ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

ಅರ್ಹ ರೈತರ ನೋಂದಣಿಯೊಂದಿಗೆ ಈಗಾಗಲೇ ನೋಂದಣಿಯಾಗಿರುವ ರೈತರ ಬಾಕಿಯಿರುವ ಇ-ಕೆವೈಸಿ ಮಾಡಿಸಲು ಮತ್ತು ರೈತರ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿಸಿಕೊಳ್ಳುವ ಮೂಲಕ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರೈತರು ತಮ್ಮ ಆಧಾರ್ ಕಾರ್ಡ್ ಹಾಗೂ ಮೊಬೈಲ್‍ನೊಂದಿಗೆ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ ಅಥವಾ ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅಥವಾ ಕೇಂದ್ರ ಸರ್ಕಾರವು ಬಿಡುಗಡೆಗೊಳಿಸಿರುವ ಪಿಎಂಕಿಸಾನ್ ಇ-ಕೆವೈಸಿ ಫೇಸ್ ರೆಗ್ನನೇಷನ್ ಆಪ್ ಮೂಲಕ ಇ-ಕೆವೈಸಿ ಮಾಡಿಸುವಂತೆ ಶಿವಮೊಗ್ಗ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular