ಬೆಂಗಳೂರು : ಬೆಂಗಳೂರಿನಲ್ಲಿ 7.11 ಕೋಟಿ ರೂ. ದರೋಡೆ ಕೇಸ್ ಗೆ ಸಂಬಂಧಿಸಿದಂತೆ ಇಬ್ಬರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಆಂಧ್ರದ ತಿರುಪತಿಯಲ್ಲಿ ದರೋಡೆಗೆ ಬಳಸಿದ್ದ ಕಾರು ಪತ್ತೆಯಾಗಿದ್ದು. ಈ ಬೆನ್ನಲ್ಲೇ ಬಾಣಸವಾಡಿಯ ಕಲ್ಯಾಣಗರದ ಇಬ್ಬರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಾರಿನ ನಂಬರ್ ಪ್ಲೇಟ್ ಬದಲಿಸಿ ಓಡಾಡುತ್ತಿದ್ದ ಇಬ್ಬರು ಶಂಕಿತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ ಪ್ರಮುಖ ಆರೋಪಿಗಳು ಇನ್ನೂ ಕೂಡ ಪತ್ತೆಯಾಗಿಲ್ಲ.
ದರೋಡೆಕೋರರ ಗ್ಯಾಂಗ್ ತಿರುಪತಿಯಲ್ಲಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ತಿರುಪತಿ ಪೊಲೀಸರ ಜೊತೆ ಬೆಂಗಳೂರಿನ ದಕ್ಷಿಣ ವಿಭಾಗದ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.
ಆರ್ ಬಿ ಎ ಅಧಿಕಾರಿಗಳ ಸೋಗಿನಲ್ಲಿ ಎಟಿಎಂಗೆ ಹಣ ಹಾಕುವ ವಾಹನ ಅಡ್ಡಗಟ್ಟಿದ ದುಷ್ಕರ್ಮಿಗಳು ಬರೋಬ್ಬರಿ 7.11 ಕೋಟಿ ಹಣ ದೋಚಿ ಪರಾರಿಯಾಗಿದ್ದಾರೆ. ಬೆಂಗಳೂರಿನ ಜಯದೇವ ಡೇರಿ ಸರ್ಕಲ್ ನಲ್ಲಿ ಈ ಘಟನೆ ನಡೆದಿದೆ. ಇನ್ನೋವಾ ಕಾರಿನಲ್ಲಿ ಬಂದ 7-8 ಮಂದಿ ದುಷ್ಕರ್ಮಿಗಳು ನಾವು ಆರ್ ಬಿ ಐ ಅಧಿಕಾರಿಗಳು ಎಂದು ವಾಹನವನ್ನ ಅಟ್ಟಗಟ್ಟಿದ್ದಾರೆ. ನಿಮ್ಮ ವಾಹನವನ್ನ ನಾವು ಪರಿಶೀಲನೆ ನಡೆಸುತ್ತೇವೆ ಎಂದು ಹೇಳಿದ ಗ್ಯಾಂಗ್ ಗನ್ ಮ್ಯಾನ್ ಹಾಗೂ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದಾರೆ. ಒಂದು ವಾಹನದಿಂದ ಇನ್ನೊಂದು ವಾಹನಕ್ಕೆ ಹಣ ಶಿಫ್ಟ್ ಮಾಡುತ್ತಿದ್ದಾಗ ಗ್ಯಾಂಗ್ ದರೋಡೆ ಮಾಡಿದೆ.
