HomeKarnatakaರಾಜ್ಯಕ್ಕೆ ಕೇಂದ್ರದಿಂದ ಗುಡ್ ನ್ಯೂಸ್: 22 ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ 784 ಕೋಟಿ ರೂ.

ರಾಜ್ಯಕ್ಕೆ ಕೇಂದ್ರದಿಂದ ಗುಡ್ ನ್ಯೂಸ್: 22 ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ 784 ಕೋಟಿ ರೂ.

ನವದೆಹಲಿ: ರಾಜ್ಯದ ರೈಲ್ವೆ ಮೇಲ್ಸೇತುವೆಗಳ ನಿರ್ಮಾಣಕ್ಕೆ ಕೇಂದ್ರದಿಂದ 784 ಕೋಟಿ ರೂ. ಅನುದಾನ ನೀಡಲಾಗಿದೆ.

ಕೇಂದ್ರ ರಸ್ತೆ ಮೂಲ ಸೌಕರ್ಯ ನಿಧಿಯ ಸೇತುಬಂಧನ್ ಯೋಜನೆ ಅಡಿಯಲ್ಲಿ ರಾಜ್ಯದಲ್ಲಿ 784 ಕೋಟಿ ರೂ ವೆಚ್ಚದಲ್ಲಿ 22 ಮೇಲ್ಸೇತುವೆ ನಿರ್ಮಾಣಕ್ಕೆ ಕೇಂದ್ರ ಭೂಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯ ಅನುಮೋದನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರೈಲ್ವೆ ಲೆವೆಲ್ ಕ್ರಾಸಿಂಗ್ ಬಳಿ ಸಂಭವಿಸುತ್ತಿರುವ ಅಪಘಾ ತಡೆ ಹಾಗೂ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ಉದ್ದೇಶದಿಂದ ಮೇಲ್ಸೇತುವೆಗಳನ್ನು ನಿರ್ಮಿಸಲಾಗುತ್ತಿದೆ. ಲೋಕೋಪಯೋಗಿ ಇಲಾಖೆ ವತಿಯಿಂದ 997 ಕೋಟಿ ರೂಪಾಯಿ ವೆಚ್ಚದಲ್ಲಿ 26 ಮೇಲ್ಸೇತುವೆ ನಿರ್ಮಾಣಕ್ಕೆ ಅನುಮೋದನೆ ನೀಡುವಂತೆ ಕೋರಿ ಪ್ರಸ್ತಾವನೆ ಸಲ್ಲಿಸಲಾಗಿತ್ತು.

22 ಕಾಮಗಾರಿಗಳನ್ನು ನಡೆಸಲು ಸಚಿವಾಲಯ ಅನುಮೋದನೆ ನೀಡಿದೆ. ರೈಲ್ವೆ ಮೇಲ್ಸೇತುವೆಗಳ ನಿರ್ಮಾಣಕ್ಕೆ 2022 -23ರಲ್ಲಿ ಸಚಿವಾಲಯ 47 ಕೋಟಿ ರೂ. ಹಂಚಿಕೆ ಮಾಡಿದ್ದು, ಈಗ 784 ಕೋಟಿ ರೂ. ವೆಚ್ಚದಲ್ಲಿ 22 ರೈಲ್ವೆ ಮೇಲ್ಸೇತುವೆಗಳನ್ನು ನಿರ್ಮಿಸಲಾಗುವುದು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular