HomeKarnatakaಆರ್.ಎಸ್.ಎಸ್ ನವರು ಗಾಬರಿಯಾಗುವುದು ಬೇಡ: ಯಾವುದೇ ಸಂಘಟನೆಯಾದರೂ ಕಾನೂನು ಪಾಲಿಸಬೇಕು ಎಂದ ಸಿಎಂ ಡಿ.ಕೆ.ಶಿವಕುಮಾರ್

ಆರ್.ಎಸ್.ಎಸ್ ನವರು ಗಾಬರಿಯಾಗುವುದು ಬೇಡ: ಯಾವುದೇ ಸಂಘಟನೆಯಾದರೂ ಕಾನೂನು ಪಾಲಿಸಬೇಕು ಎಂದ ಸಿಎಂ ಡಿ.ಕೆ.ಶಿವಕುಮಾರ್

ಕೊಡಗು: ಆರ್.ಎಸ್.ಎಸ್ ಸೇರಿದಂತೆ ಯಾವುದೇ ಸಂಘಟನೆ ಸರ್ಕಾರಿ ಜಾಗಗಳಲ್ಲಿ ಕಾರ್ಯಕ್ರಮ ನಡೆಸಲು ಅನುಮತಿ ಪಡೆಯಬೇಕು ಎನ್ನುವ ನಿಯಮದ ಬಗ್ಗೆ ಬಿಜೆಪಿ ನಾಯಕ ಬಿ.ಎಲ್.ಸಂತೋಷ್ ಆಕ್ಷೇಪ ವ್ಯಕ್ತಪಡಿಸಿರುವ ವಿಚಾರವಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಕೊಡಗಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್, ನಾವು ಮೊದಲಿನಿಂದಲೂ ಯಾವುದನ್ನೋ ಹಿಡಿದುಕೊಂಡು ರಾಜಕೀಯ ಮಾಡುವುದಿಲ್ಲ. ಯಾರೂ ಗಾಬರಿಪಡುವ ಅಗತ್ಯವಿಲ್ಲ. ಯಾವುದೇ ಸಂಘಟನೆಯಾಗಲಿ ಕಾನೂನು ಪಾಲಿಸಬೇಕು. ಸರ್ಕಾರಕ್ಕೆ ಅನುಮತಿ ಕೋರಿ ಅರ್ಜಿ ಬಂದರೆ, ನಿಯಮಾನುಸಾರ ಅಗತ್ಯ ಅನುಮತಿ ಹಾಗೂ ಸಿಬ್ಬಂದಿ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

ಕೃಷ್ಣ ಬೈರೇಗೌಡರು ಸಹ ಫ್ರೀಡಂ ಹಬ್ಬ ಮಾಡಲು ಸರ್ಕಾರದ ಅನುಮತಿ ಪಡೆದರು. ದಳ, ಬಿಜೆಪಿ, ಕಾಂಗ್ರೆಸ್ ಹಾಗೂ ಇತರೇ ಸಂಘಟನೆಗಳು ಯಾರೇ ಆದರೂ ನಾವೆಲ್ಲರೂ ಕಾನೂನಿನ ಚೌಕಟ್ಟಿನಲ್ಲಿ ಕಾರ್ಯಕ್ರಮ ನಡೆಸಲು ಅವಕಾಶವಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ವೋಟ್ ಚೋರಿ ಹೋರಾಟದ ಸಂದರ್ಭದಲ್ಲಿ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಲು ಜಾಥಾ ಮಾಡಬೇಕಾಗಿತ್ತು. ಆಗ ನಾವು ಅಧಿಕಾರ ದುರುಪಯೋಗ ಮಾಡಬಾರದು ಎಂಬ ಕಾರಣಕ್ಕೆ ಕಾನೂನು ಪಾಲಿಸುವಂತೆ ಮನವಿ ಮಾಡಿದ್ದೆವು. ಸುಪ್ರೀಂ ಕೋರ್ಟ್‌ನ ನಿರ್ದೇಶನಗಳನ್ನು ಗೌರವಿಸುವುದು ನಮ್ಮ ಜವಾಬ್ದಾರಿ ಎಂದು ತಿಳಿಸಿದರು.

ನಾವು ಅಧಿಕಾರದಲ್ಲಿದ್ದೇವೆ ಎಂಬ ಕಾರಣಕ್ಕೆ ಅಧಿಕಾರ ದುರುಪಯೋಗ ಮಾಡಬಾರದು. ನ್ಯಾಯಾಲಯ ನೀಡಿರುವ ಕಾನೂನಿಗೆ ನಾವು ಗೌರವ ಕೊಡುತ್ತೇವೆ. ಅಂದು ಪರಮೇಶ್ವರ್ ಅವರು ಸೇರಿದಂತೆ ನಾವೆಲ್ಲರೂ ರಾಹುಲ್ ಗಾಂಧಿ ಅವರಲ್ಲಿ ಮನವಿ ಮಾಡಿ ಕಾನೂನಿಗೆ ಗೌರವ ನೀಡಿದೆವು ಎಂದು ಹೇಳಿದರು.

ಸ್ವಾತಂತ್ರ್ಯ ಉಪ್ಪಿನ ಸತ್ಯಾಗ್ರಹ, ಚರಕದಿಂದ ಮಾತ್ರ ಬರಲಿಲ್ಲ ಎನ್ನುವ ಬಿ.ಎಲ್.ಸಂತೋಷ್ ಹೇಳಿಕೆ ಬಗ್ಗೆ ಕೇಳಿದಾಗ, ಅವರು ಹಿರಿಯರಿದ್ದಾರೆ. ಅವರ ಮಾರ್ಗದರ್ಶನವನ್ನೂ ಕೇಳೋಣ. ಕಾನೂನಿನಲ್ಲಿ ಇದ್ದಂತಹ ಅಂಶಗಳಿಗೆ ನಾವು ಇನ್ನೂ ಸ್ಪಷ್ಟತೆ ಕೊಟ್ಟಿದ್ದೇವೆ ಅಷ್ಟೇ.‌ ಯಾರೂ ಗಾಬರಿಯಾಗಬೇಡಿ ಎಂದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular