ಬೆಂಗಳೂರು: ಆರ್‌ಎಸ್‌ಎಸ್ (RSS) ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿರುವ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಾಂಗ್ರೆಸ್ ಯುವ ನಾಯಕ ಮೊಹಮ್ಮದ್ ನಲಪಾಡ್ ಅವರಿಗೆ ಬೆಂಗಳೂರಿನ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಪ್ರಕರಣದ ವಿಚಾರಣೆಯ ಹಿನ್ನೆಲೆಯಲ್ಲಿ ಪ್ರಿಯಾಂಕ್ ಖರ್ಗೆ ಹಾಗೂ ಮೊಹಮ್ಮದ್ ನಲಪಾಡ್ ಅವರು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಇಬ್ಬರ ವಾದ ಆಲಿಸಿದ ನ್ಯಾಯಾಲಯವು ತಲಾ ₹10 ಸಾವಿರ ವೈಯಕ್ತಿಕ ಶ್ಯೂರಿಟಿ ನೀಡುವಂತೆ ಸೂಚಿಸಿ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಆರ್‌ಎಸ್‌ಎಸ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಕೆಲವು ಷರತ್ತುಗಳನ್ನು ವಿಧಿಸಿ ಜಾಮೀನು ನೀಡಿದೆ.
ಆರ್‌ಎಸ್‌ಎಸ್ ಹಾಗೂ ಅದರ ಸದಸ್ಯರ ವಿರುದ್ಧ ಅವಹೇಳನಕಾರಿ ಹಾಗೂ ಮಾನಹಾನಿಕರ ಹೇಳಿಕೆಗಳನ್ನು ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಕರ್ನಾಟಕ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಹರಿಸ್ ನಲಪಾಡ್ ಅವರಿಗೆ ಬೆಂಗಳೂರಿನ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು.
ದೂರಿನ ಪ್ರಕಾರ, ಪ್ರಿಯಾಂಕ್ ಖರ್ಗೆ ಅವರು 2025ರ ಆಗಸ್ಟ್ 14ರಂದು ತಮ್ಮ ‘X’ ಖಾತೆಯಲ್ಲಿ ಆರ್‌ಎಸ್‌ಎಸ್ ಸದಸ್ಯರನ್ನು ಗುರಿಯಾಗಿಸಿಕೊಂಡು ಆಕ್ಷೇಪಾರ್ಹ ಹೇಳಿಕೆಗಳನ್ನು ಪ್ರಕಟಿಸಿದ್ದರು ಎನ್ನಲಾಗಿದೆ. ಇದೇ ವೇಳೆ, ನಲಪಾಡ್ ಅವರು ಯೂಟ್ಯೂಬ್ ಚಾನೆಲ್‌ವೊಂದರ ಸಂದರ್ಶನದಲ್ಲಿ ಆರ್‌ಎಸ್‌ಎಸ್ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ಯೂಟ್ಯೂಬ್ ಚಾನೆಲ್’ನಲ್ಲಿ ನಲಪಾಡ್ ಆರ್ ಎಸ್ ಎಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಆರ್ ಎಸ್ ಎಸ್ ವಿರುದ್ಧ ಅವಹೇಳಕಾರಿಯಾಗಿ ಟ್ವೀಟ್ ಮಾಡಿದ್ದರು ಎಂಬ ಆರೋಪವಿದೆ.ಬೆಂಗಳೂರಿನ ಸಿದ್ದಾಪುರದ ಆರ್ ಎಸ್ ಎಸ್ ಕಾರ್ಯಕರ್ತ ಎ ತೇಜಸ್ ಈ ದೂರು ದಾಖಲಿಸಿದ್ದರು.

