ಜೋಧ್ ಪುರ: ಆರ್.ಎಸ್.ಎಸ್. ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರನ್ನು ಜೋಧಪುರದ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಧಿಕ ರಕ್ತದೊತ್ತಡದ ಕಾರಣ ದತ್ತಾತ್ರೇಯ ಹೊಸಬಾಳೆ ಅಸ್ವಸ್ಥರಾಗಿದ್ದು, ಅವರನ್ನು ಏಮ್ಸ್ ಆಸ್ಪತ್ರೆಗೆ ಸೋಮವಾರ ದಾಖಲಿಸಲಾಗಿದೆ. ಸೋಮವಾರ ಮಧ್ಯಾಹ್ನ ದತ್ತಾತ್ರೇಯ ಹೊಸಬಾಳೆ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ನುರಿತ ವೈದ್ಯರ ತಂಡ ಚಿಕಿತ್ಸೆ ನೀಡಿ ನಿಗಾ ವಹಿಸಿದೆ. ಚಿಕಿತ್ಸೆ ಬಳಿಕ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದೆ.
ಆರ್.ಎಸ್.ಎಸ್. ಮಾಧ್ಯಮ ವಿಭಾಗದ ಮುಖ್ಯಸ್ಥ ಅನಿಲ್ ಅಂಬೇಕರ್ ಈ ಬಗ್ಗೆ ಮಾಹಿತಿ ನೀಡಿದ್ದು, ದತ್ತಾತ್ರೇಯ ಹೊಸಬಾಳೆ ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ.