HomeLatest Newsಆರ್.ಎಸ್.ಎಸ್. ಭಾರತದ ತಾಲಿಬಾನ್: ಕಾಂಗ್ರೆಸ್ ನಾಯಕ ಹರಿಪ್ರಸಾದ್ ಹೇಳಿಕೆ

ಆರ್.ಎಸ್.ಎಸ್. ಭಾರತದ ತಾಲಿಬಾನ್: ಕಾಂಗ್ರೆಸ್ ನಾಯಕ ಹರಿಪ್ರಸಾದ್ ಹೇಳಿಕೆ

ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್.ಎಸ್.ಎಸ್.) ಭಾರತದ ತಾಲಿಬಾನ್ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿಕೆ ನೀಡಿದ್ದು ವಿವಾದಕ್ಕೀಡಾಗಿದೆ.

ಸುದ್ದಿ ಸಂಸ್ಥೆಯೊಂದರ ಜೊತೆ ಮಾತನಾಡಿದ ಹರಿಪ್ರಸಾದ್ ಅವರು, ಪ್ರಧಾನಿ ಮೋದಿ ಇತ್ತೀಚೆಗೆ ಆರ್.ಎಸ್.ಎಸ್. ಹೊಗಳಿದ್ದನ್ನು ಟೀಕಿಸುವ ಭರದಲ್ಲಿ ಆರ್‌.ಎಸ್‌.ಎಸ್‌. ಬಗ್ಗೆ ಹೇಳಿಕೆ ನೀಡಿದ್ದು, ಆರ್.ಎಸ್.ಎಸ್. ಭಾರತದ ತಾಲಿಬಾನ್ ಎಂದು ಹೇಳಿದ್ದಾರೆ.

ಉಗ್ರರ ಮೇಲೆ ಕಾಂಗ್ರೆಸ್ ಗೆ ಪ್ರೀತಿ ಎನ್ನುವ ಆರೋಪಕ್ಕೆ ಹರಿಹಾಯ್ದ ಅವರು, ದೇಶದಲ್ಲಿ ಶಾಂತಿ ಕದಡಲು ಆರ್.ಎಸ್.ಎಸ್. ಪ್ರಯತ್ನಿಸುತ್ತಿದೆ. ಅವರು ಭಾರತದ ತಾಲಿಬಾನಿಗಳು. ಅಂತವರನ್ನು ಮೋದಿ ಕೆಂಪು ಕೋಟೆಯಲ್ಲಿ ಹೊಗಳುತ್ತಾರೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅವರ ಹೇಳಿಕೆಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಕಾಂಗ್ರೆಸ್ ರಾಷ್ಟ್ರೀಯವಾದಿ ಸಂಘಟನೆಯನ್ನು ನಿಷೇಧಿಸುತ್ತದೆ. ಮೂಲಭೂತಾವಾದಿ ಸಂಘಟನೆಗಳಾದ ನಿಷೇಧಿತ ಪಿಎಫ್ಐ, ಸಿಮಿ ಸಂಘಟನೆಗಳ ಮೇಲೆ ಹೆಚ್ಚಿನ ಪ್ರೀತಿ ತೋರಿಸುತ್ತದೆ ಎಂದು ಹೇಳಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular