HomeLatest NewsBREAKING: ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ FIR ದಾಖಲು

BREAKING: ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ FIR ದಾಖಲು

ಮಂಗಳೂರು: ಪ್ರಚೋದನಕಾರಿ ಹೇಳಿಕೆ, ದ್ವೇಷ ಭಾಷಣ ಹಿನ್ನೆಲೆಯಲ್ಲಿ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈಶ್ವರಿ ಪದ್ಮಂಜ ಎಂಬುವವರ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಎನ್ ಎಸ್ ಕಾಯ್ದೆ 79, 196, 290, 302 ಹಾಗೂ 3(5) ಕಲಂ ಅಡಿ ಕೇಸ್ ದಾಖಲಾಗಿದೆ. ಪುತ್ತೂರಿನ ಉಪ್ಪಳಿಗೆಯ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಲ್ಲಡ್ಕ ಪ್ರಭಾಕರ್ ಭಟ್, ಧಾರ್ಮಿಕ ದ್ವೇಷ ಹಾಗೂ ಮಹಿಳೆಯರ ಘನತೆಗೆ ಧಕ್ಕೆ ತರುವಂತಹ ರೀತಿಯ ಭಾಷಣ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular