HomeKarnatakaಕಲ್ಲಡ್ಕ ಪ್ರಭಾಕರ ಭಟ್ ಗೆ ನಿರೀಕ್ಷಣಾ ಜಾಮೀನು

ಕಲ್ಲಡ್ಕ ಪ್ರಭಾಕರ ಭಟ್ ಗೆ ನಿರೀಕ್ಷಣಾ ಜಾಮೀನು

ಶ್ರೀರಂಗಪಟ್ಟಣ: ಮುಸ್ಲಿಂ ಮಹಿಳೆಯರ ಕುರಿತಾಗಿ ಅವಹೇಳನಕಾರಿ ಹೇಳಿಕೆ ನೀಡಿದ ಆರ್.ಎಸ್.ಎಸ್. ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಂಗಪಟ್ಟಣ ನ್ಯಾಯಾಲಯ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿದೆ.

ಡಿಸೆಂಬರ್ 24ರಂದು ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣಾ ವೇದಿಕೆ ಆಯೋಜಿಸಿದ್ದ ಸಂಕೀರ್ತನಾ ಯಾತ್ರೆಯಲ್ಲಿ ಭಾಗವಹಿಸಿದ್ದ ಕಲ್ಲಡ್ಕ ಪ್ರಭಾಕರ ಭಟ್ ಅವರು, ಮುಸ್ಲಿಂ ಮಹಿಳೆಯರಿಗೆ ಪರ್ಮನೆಂಟ್ ಗಂಡ ಇರಲಿಲ್ಲ. ತ್ರಿವಳಿ ತಲಾಖ್ ರದ್ದುಗೊಳಿಸುವ ಮೂಲಕ ಅವರಿಗೆ ಪರ್ಮನೆಂಟ್ ಗಂಡ ಕೊಟ್ಟಿದ್ದು ಮೋದಿ ಎಂದು ಹೇಳಿಕೆ ನೀಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದಕ್ಕೆ ಸಂಬಂಧಿಸಿದಂತೆ ನಜ್ಮಾ ನಜೀರ್ ಶ್ರೀರಂಗಪಟ್ಟಣದಲ್ಲಿ ದೂರು ದಾಖಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಂಗಪಟ್ಟಣ ನ್ಯಾಯಾಲಯ ಪ್ರಭಾಕರ ಭಟ್ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular