BIG NEWS: ಮೋದಿ ಕೆಳಗಿಳಿಸಿ ಗಡ್ಕರಿ ಪ್ರಧಾನಿ ಮಾಡಲು ಆರ್.ಎಸ್.ಎಸ್. ಹೈವೋಲ್ಟೇಜ್ ಮೀಟಿಂಗ್: ಸಚಿವ ಸಂತೋಷ್ ಲಾಡ್ ಮಾಹಿತಿ

ಬೀದರ್: ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಆರ್.ಎಸ್.ಎಸ್. ಹೈವೋಲ್ಟೇಜ್ ಸಭೆ ನಡೆಸಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.

ಬಸವಕಲ್ಯಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಬಾಂಡ್ ವಿಚಾರದಲ್ಲಿ ಪ್ರಧಾನಿ ಮೋದಿ ರಾಜೀನಾಮೆ ಕೊಡಬೇಕೆಂಬ ಕೂಗು ಇದೆ. ಹೀಗಾಗಿ ಮೋದಿಯವರನ್ನು ಅಧಿಕಾರದಿಂದ ಕೆಳಗಿಳಿಸಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಪ್ರಧಾನಿ ಮಾಡಲು ಚಿಂತನೆ ನಡೆದಿದೆ. ಈ ನಿಟ್ಟಿನಲ್ಲಿ ಆರ್.ಎಸ್.ಎಸ್. ಹೈವೋಲ್ಟೇಜ್ sBe ನಡೆಸಿರುವುದಾಗಿ ತಿಳಿಸಿದ್ದಾರೆ.

ಮೈಸೂರಿನಲ್ಲಿ ಸತೀಶ್ ಜಾರಕಿಹೊಳಿ ಸೇರಿದಂತೆ ಇತರೆ ಸಚಿವರು ಸಭೆ ನಡೆಸುವುದರಲ್ಲಿ ವಿಶೇಷವೇನೂ ಇಲ್ಲ. ಎಲ್ಲಾ ಕಡೆಗಳಲ್ಲಿಯೂ ರಾಜಕೀಯ ನಾಯಕರ ಸಭೆಗಳು ನಡೆಯುತ್ತವೆ. ಅದರಲ್ಲಿ ವಿಶೇಷವೇನಿಲ್ಲ. ಆದರೆ, ಮೋದಿಯವರನ್ನು ಅಧಿಕಾರದಿಂದ ಕೆಳಗಿಳಿಸಲು ಆರ್.ಎಸ್.ಎಸ್. ಸಭೆ ನಡೆಸಿರುವುದು ಪ್ರಮುಖವಾಗಿದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read