ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ-ಆರ್.ಎಸ್.ಎಸ್ ಈವರೆಗೂ ನೋಂದಣಿಯಾಗದಿರುವ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು, ನೋಂದಣಿಯಾಗದಿರುವ ಸಂಘ ಆರ್.ಎಸ್.ಎಸ್ ಗೆ ದೇಶದಲ್ಲಿ ಪ್ರತ್ಯೇಕ ಕಾನೂನು ಇದೆಯಾ? ಎಂದು ಕಾಂಗ್ರೆಸ್ ನಾಯಕರು ಕೇಳುತ್ತಿದ್ದಾರೆ. ಈ ಎಲ್ಲಾ ಪ್ರಶ್ನೆಗಳಿಗೆ ಇದೀಗ ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಉತ್ತರ ನೀಡಿದ್ದಾರೆ.
ಆರ್.ಎಸ್.ಎಸ್ ಶತಮಾನೋತ್ಸವ ಹಿನ್ನೆಲೆಯಲ್ಲಿ ಬೆಂಗಳೂರಿನ ಹೊಸಕೆರೆಹಳ್ಳಿ ಪಿಎಸ್ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಲವು ಪ್ರಶ್ನೆಗಳಿಗೆ ಮೋಹನ್ ಭಾಗವತ್ ಉತ್ತರ ನೀಡಿದ್ದಾರೆ.
ಆರ್.ಎಸ್.ಎಸ್ ಸ್ಥಾಪನೆಯಾಗಿದ್ದು 1925ರಲ್ಲಿ. ಆಗ ಭಾರತದಲ್ಲಿದ್ದ ಬ್ರಿಟೀಷರ ಬಳಿ ನಾವು ಸಂಘವನ್ನು ನೋಂದಣಿ ಮಾಡಿಕೊಳ್ಳಬೇಕಿತ್ತಾ? ಸ್ವಾತಂತ್ರ್ಯ ಬಂದ ನಂತರವೂ ನೋಂದಣಿ ಕಡ್ದಾಯ ಮಾಡಿಲ್ಲ. ಹಿಂದೂ ಧರ್ಮ ಕೂಡ ನೋಂದಣಿಯಾಗಿಲ್ಲ ಎಂದಿದ್ದಾರೆ.
ಆರ್.ಎಸ್.ಎಸ್ ನಿಷೇಧದ ಬಗ್ಗೆಯೂ ಚರ್ಚೆ ನಡೆದಿದ್ದು, ಕೋರ್ಟ್ ಇದನ್ನು ತಿರಸ್ಕರಿಸಿದೆ. ನಮ್ಮದು ಸಂವಿಧಾನಾತ್ಮಕ ಸಂಘವಾಗಿದ್ದು, ಆರ್.ಎಸ್.ಎಸ್ ಆದಾಯ ತೆರಿಗೆ ಸಹ ಕಟ್ಟುತ್ತಿದೆ ಎಂದು ತಿಳಿಸಿದ್ದಾರೆ.
ನಮ್ಮಲ್ಲಿ ಜಾತಿ, ಧರ್ಮ, ಲಿಂಗ, ಮುಸ್ಲಿಂ, ಕ್ರೈಸ್ತ, ಹಿಂದೂ, ಬ್ರಾಹ್ಮಣ, ಶೈವ ಎಂಬ ಪಂಥಗಳಿಗೆ ಅವಕಾಶವಿಲ್ಲ. ಯಾವುದೇ ಧರ್ಮದವರೂ ಶಾಖೆಗೆ ಬರಬಹುದು. ಆದರೆ ಶಾಖೆಗೆ ಬರುವವರು ತಮ್ಮ ಧರ್ಮವನ್ನು ಹೊರಗಿಟ್ಟು ಭಾರತ ಮಾತೆಯ ಮಕ್ಕಳಾಗಿ ಬರಬೇಕು. ಸಂಘದ ನಿಯಮಗಳನ್ನು ಪಾಲಿಸಬೇಕು ಎಂದು ಹೇಳಿದರು.
