ಯಾದಗಿರಿ: ಆರ್.ಎಸ್.ಎಸ್.(RSS) ಪಥ ಸಂಚಲನದಲ್ಲಿ ಭಾಗವಹಿಸಿದ್ದ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಯಾದಗಿರಿ ಡಿಡಿಪಿಐ ಅವರು ಆರ್.ಎಸ್.ಎಸ್. ಪಥಸಂಚಲನದಲ್ಲಿ ಭಾಗಿಯಾದ ಆರೋಪದ ಮೇಲೆ ಮುಖ್ಯ ಶಿಕ್ಷಕ ಸೇರಿ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಿದ್ದಾರೆ.
ಸುರಪುರ ತಾಲೂಕಿನ ಕುಪ್ಪಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಅಣ್ಣಾ ಸಾಹೇಬ, ಹುಣಸಗಿಯ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಶಿಕ್ಷಕ ಗುರುರಾಜ ಜೋಶಿ ಅವರನ್ನು ಅಮಾನತು ಮಾಡಲಾಗಿದೆ. ಆರ್.ಎಸ್.ಎಸ್.ಗೆ 100 ವರ್ಷ ತುಂಬಿದ ಹಿನ್ನೆಲೆಯಲ್ಲಿ ಕಳೆದ ಕಳೆದ ವರ್ಷ ನವೆಂಬರ್ ನಲ್ಲಿ ನಡೆದಿದ್ದ ಆರ್.ಎಸ್.ಎಸ್. ಪಥ ಸಂಚಲನದಲ್ಲಿ ಭಾಗವಹಿಸಿದ್ದರು.
ವಿಜಯಪುರ ಜಿಲ್ಲೆಯ ತಾಳಿಕೋಟೆಯಲ್ಲಿ ನಡೆದ ಪಥ ಸಂಚಲನದಲ್ಲಿ ಈ ಶಿಕ್ಷಕರು ಭಾಗವಹಿಸಿದ್ದ ಆರೋಪದ ಬಗ್ಗೆ ವಿಚಾರಣೆ ಕಾಯ್ದಿರಿಸಿ ಅಮಾನತು ಮಾಡಲಾಗಿದೆ ಎಂದು ಹೇಳಲಾಗಿದೆ.

