HomeKarnatakaಆರ್.ಎಸ್.ಎಸ್. ಹಿಂದೆಯೂ ನೋಂದಣಿಯಾಗಿಲ್ಲ, ಮುಂದೆಯೂ ಆಗಲ್ಲ: ಪ್ರಿಯಾಂಕ್ ಖರ್ಗೆಗೆ ಬಿ.ಎಲ್. ಸಂತೋಷ್ ತಿರುಗೇಟು

ಆರ್.ಎಸ್.ಎಸ್. ಹಿಂದೆಯೂ ನೋಂದಣಿಯಾಗಿಲ್ಲ, ಮುಂದೆಯೂ ಆಗಲ್ಲ: ಪ್ರಿಯಾಂಕ್ ಖರ್ಗೆಗೆ ಬಿ.ಎಲ್. ಸಂತೋಷ್ ತಿರುಗೇಟು

ಬೆಂಗಳೂರು: ಸಂಘ ರಿಜಿಸ್ಟ್ರೇಷನ್ ಮಾಡುವ ಅವಶ್ಯಕತೆ ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೇಳಿದ್ದಾರೆ.

ಈ ಮೂಲಕ ಆರ್.ಎಸ್.ಎಸ್.ಗೆ ಲಗಾಮು ಹಾಕಲು ಹೊರಟ ಸಚಿವ ಪ್ರಿಯಾಂಕ್ ಖರ್ಗೆಗೆ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಹಿಂದೂ ಜಾಗರಣ ವೇದಿಕೆ ಆಯೋಜಿಸಿದ್ದ ಅಖಂಡ ಭಾರತ ಸಂಕಲ್ಪ ದಿನಾಚರಣೆಯಲ್ಲಿ ಮಾತನಾಡಿದ ಅವರು, ಪ್ರಿಯಾಂಕ ಖರ್ಗೆ ಅವರೇ ಎಲ್ಲರನ್ನು ನೋಂದಣಿ ಮಾಡುವ ಅಗತ್ಯವಿಲ್ಲ ಎಂದು ಆರ್.ಎಸ್.ಎಸ್.ಗೆ ಲಗಾಮು ಹಾಕಲು ಹೊರಟ ಸರ್ಕಾರಕ್ಕೆ ಚಾಟಿ ಬೀಸಿದ್ದು, ಸಂಘ ರಿಜಿಸ್ಟ್ರೇಷನ್ ಮಾಡುವ ಅವಶ್ಯಕತೆ ಇಲ್ಲ. ನೋಂದಣಿಯಾಗದೆ ಆರ್.ಎಸ್.ಎಸ್. ಹಿಂದೂಗಳನ್ನು ರಕ್ಷಿಸಿದೆ. ಪ್ರಿಯಾಂಕ್ ಖರ್ಗೆ ಅವರೇ ಸಂಘ ನೋಂದಣಿ ಮಾನದಂಡವಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರ್.ಎಸ್.ಎಸ್. ಈ ಹಿಂದೆ ನೋಂದಣಿಯಾಗಿಲ್ಲ, ಮುಂದೆಯೂ ಆಗುವುದಿಲ್ಲ. ಸಂಘ ನೊಂದಣಿ ಮಾಡುವ ಅವಶ್ಯಕತೆ ಇಲ್ಲ. ಖರ್ಗೆ ಕುಟುಂಬ ರಜಾಕರಿಗೆ ಹೆದರಿ ಕಲಬುರಗಿಗೆ ಓಡಿ ಬಂತು. ಆಗ ನಿಮ್ಮ ರಕ್ಷಣೆಗೆ ನಿಂತಿದ್ದು ಇದೇ ಆರ್.ಎಸ್.ಎಸ್., ನಿಮ್ಮ ರಕ್ಷಣೆಗೆ ಪೊಲೀಸರು, ರಾಜಕಾರಣಿಗಳು ಬಂದಿಲ್ಲ. ರಜಾಕರ ವಿರುದ್ಧ ನಿಂತಿದ್ದು ಇದೇ ಆರ್.ಎಸ್.ಎಸ್. ಎಂದು ಬಿ.ಎಲ್. ಸಂತೋಷ್ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular