HomeKarnatakaಖಾಸಗಿ ಶಾಲೆಗೆ ಮಕ್ಕಳನ್ನು ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್: RTE ಪ್ರವೇಶಕ್ಕೆ ವೇಳಾಪಟ್ಟಿ ಪ್ರಕಟ: ಏ....

ಖಾಸಗಿ ಶಾಲೆಗೆ ಮಕ್ಕಳನ್ನು ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್: RTE ಪ್ರವೇಶಕ್ಕೆ ವೇಳಾಪಟ್ಟಿ ಪ್ರಕಟ: ಏ. 5 ರಿಂದ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು: ರಾಜ್ಯದಲ್ಲಿರುವ ಅನುದಾನಿತ, ಅನುದಾನ ರಹಿತ ಖಾಸಗಿ ಶಾಲೆಗಳಲ್ಲಿ ಲಭ್ಯವಿರುವ ಆರ್.ಟಿ.ಇ. ಸೀಟುಗಳ ಪ್ರವೇಶಕ್ಕಾಗಿ ಶಾಲಾ ಶಿಕ್ಷಣ ಇಲಾಖೆ ವೇಳಾಪಟ್ಟಿ ಪ್ರಕಟಿಸಿದೆ.

ಏಪ್ರಿಲ್ 5ರಿಂದ ಮೇ 12ರ ವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಶಾಲಾ ಶಿಕ್ಷಣ ಇಲಾಖೆಯ schooleducation.kar.gov.in ವೆಬ್ಸೈಟ್ ನಲ್ಲಿ ನಿಗದಿತ ಲಿಂಕ್ ಮೂಲಕ ಪೋಷಕರು ಮಕ್ಕಳ ಆರ್.ಟಿ.ಇ. ಪ್ರವೇಶಕ್ಕೆ ಅರ್ಜಿ ಸಲ್ಲಿಸಬಹುದು.

ಏಪ್ರಿಲ್ 16ರಿಂದ ಮೇ 15ರವರೆಗೆ ಸಲ್ಲಿಕೆಯಾದ ಅರ್ಜಿಗಳ ನೈಜತೆ ಪರಿಶೀಲಿಸಬೇಕು. ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಮೇ 17ರಂದು ಪ್ರಕಟಿಸಬೇಕು. ಆನ್ಲೈನ್ ಲಾಟರಿಯ ಮೂಲಕ ಮೇ 21ರಂದು ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕಟಿಸಬೇಕು. ಮೇ 31ರೊಳಗೆ ತಮ್ಮ ಮಕ್ಕಳನ್ನು ಪೋಷಕರು ಶಾಲೆಗಳಿಗೆ ದಾಖಲಿಸಬೇಕು ಎಂದು ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular