HomeKarnatakaBIG NEWS: ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ನೀಡದ ತಹಶೀಲ್ದಾರ್ ಗೆ 25,000 ರೂ. ದಂಡ

BIG NEWS: ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ನೀಡದ ತಹಶೀಲ್ದಾರ್ ಗೆ 25,000 ರೂ. ದಂಡ

ಬೆಂಗಳೂರು: ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ನೀಡದ ತಹಸಿಲ್ದಾರ್ ಗೆ ಕರ್ನಾಟಕ ಮಾಹಿತಿ ಆಯೋಗ 25000 ರೂ. ದಂಡ ವಿಧಿಸಿದೆ. ಯಲಹಂಕ ತಹಶೀಲ್ದಾರ್ ಅನಿಲ್ ಕುಮಾರ್ ಅರೋಲಿಕರ್ ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ನೀಡದಿರುವ ಜೊತೆಗೆ ಮಾಹಿತಿ ಆಯೋಗ ನೀಡಿದ ಶೋಕಾಸ್ ನೋಟಿಸ್ ಗೂ ಉತ್ತರ ನೀಡದ ಕಾರಣ 25,000ರೂ. ದಂಡ ವಿಧಿಸಿದ್ದು, ಶಿಸ್ತು ಕ್ರಮ ಕೈಗೊಳ್ಳುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ನಿರ್ದೇಶನ ನೀಡಲಾಗಿದೆ.

ಬೆಂಗಳೂರಿನ ತಾವರೆಕೆರೆ ನಿವಾಸಿಅಶ್ವತ್ಥ್ ರೆಡ್ಡಿ ಅವರು ಸಲ್ಲಿಸಿದ್ದ ಎರಡನೇ ಮೇಲ್ಮನವಿ ಪರಿಶೀಲಿಸಿದ ಮಾಹಿತಿ ಹಕ್ಕು ಆಯೋಗದ ಅಧ್ಯಕ್ಷ ಎನ್.ಸಿ. ಶ್ರೀನಿವಾಸ ಅವರಿದ್ದ ಪೀಠದಿಂದ ಈ ಆದೇಶ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ನಾಟಕ ಮಾಹಿತಿ ಆಯೋಗ ಮೇಲ್ಮನವಿ ಮಾನ್ಯ ಮಾಡಿದ್ದು, ಕೂಡಲೇ ಕಾಯ್ದೆಯಂತೆ ಅರ್ಜಿದಾರರಿಗೆ ಮಾಹಿತಿ ಒದಗಿಸಬೇಕು ಎಂದು ಆದೇಶ ನೀಡಿದೆ.  ಮುಂದಿನ ವಿಚಾರಣೆ ದಿನಾಂಕದೊಳಗೆ ಯಲಹಂಕ ತಹಶೀಲ್ದಾರ್ ಆಗಿರುವ ಮಾಹಿತಿ ಅಧಿಕಾರಿ ಅನಿಲ್ ಕುಮಾರ್ 25,000 ರೂ. ದಂಡ ಪಾವತಿಸಬೇಕು. ಅವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದು, ಡಿಸೆಂಬರ್ 27 ರೊಳಗೆ ಅನುಪಾಲನಾ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular