BREAKING : ಬೆಳ್ಳಂ ಬೆಳಗ್ಗೆ ರಾಜ್ಯಾದ್ಯಂತ ‘RTO’ ಚೆಕ್ ಪೋಸ್ಟ್ ಗಳ ಮೇಲೆ ಲೋಕಾಯುಕ್ತ ದಾಳಿ |Lokayukta Raid

ಬೆಂಗಳೂರು: ಆರ್ ಟಿ ಒ ಸಿಬ್ಬಂದಿಗಳ ವಿರುದ್ಧ ಲಂಚದ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ಆರ್ ಟಿ ಒ ಚೆಕ್ ಪೋಸ್ಟ್ ಗಳ ಮೇಲೆ ದಾಳಿ ನಡೆಸಿದ್ದಾರೆ.

ಇಂದು ಬೆಳ್ಳಂಬೆಳಿಗ್ಗೆ ಕೋಲಾರ, ಬೀದರ್, ವಿಜಯಪುರ, ಬಳ್ಳಾರಿ ಜಿಲ್ಲೆಗಳ ಆರ್ ಟಿ ಒ ಚೆಕ್ ಪೋಸ್ಟ್ ಗಳ ಮೇಲೆ ದಾಳಿ ನಡೆಸಲಾಗಿದ್ದು, ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಕೋಲಾರದ ಶ್ರೀನಿವಾಸಪುರ ತಾಲೂಕಿನ ತಾಡಿಗೋಳ ಕ್ರಾಸ್ ಬಳಿ ಇರುವ ಆರ್ ಟಿ ಒ ಚೆಕ್ ಪೋಸ್ಟ್, ಮುಳಬಾಗಿಲಿನ ನಂಗುಲಿ ಆರ್ ಟಿ ಒ ಚೆಕ್ ಪೋಸ್ಟ್ ಗಳ ಮೇಲೆ ಕೋಲಾರ ಲೋಕಾಯುಕ್ತ ಎಸ್ ಪಿ ಧನಂಜಯ ನೇತೃತ್ವದಲ್ಲಿ ದಾಳಿ ನಡೆದಿದೆ.

ಎರಡು ಚೆಕ್ ಪೋಸ್ಟ್ ಗಳ ಮೇಲೆ ದಾಳಿ ವೇಳೆ 20 ಸಾವಿರಕ್ಕೂ ಅಧಿಕ ಹಣ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಬೀದರ್ ನ ಹುಮ್ನಾಬಾದ್, ವಿಜಯಪುರದ ಚಡಚಣದ ಧೂಳಖೇಡ್ ಆರ್ ಟಿ ಒ ಚೆಕ್ ಪೋಸ್ಟ್ ಗಳ ಮೇಲೂ ದಾಳಿ ನಡೆಸಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read