HomeLatest NewsBIG NEWS: ಐಷಾರಾಮಿ ಕಾರುಗಳ ನೋಂದಣಿಗೆ RTO ಕಚೇರಿಗಳಲ್ಲಿ ಖೊಟ್ಟಿ ದಾಖಲೆ ಸೃಷ್ಟಿಸಿದರೆ ಕಠಿಣ ಕ್ರಮ:...

BIG NEWS: ಐಷಾರಾಮಿ ಕಾರುಗಳ ನೋಂದಣಿಗೆ RTO ಕಚೇರಿಗಳಲ್ಲಿ ಖೊಟ್ಟಿ ದಾಖಲೆ ಸೃಷ್ಟಿಸಿದರೆ ಕಠಿಣ ಕ್ರಮ: ಸಚಿವ ರಾಮಲಿಂಗಾರೆಡ್ಡಿ ಎಚ್ಚರಿಕೆ

ಬೆಳಗಾವಿ: ರಾಜ್ಯದ ಯಾವುದೇ ಆರ್.ಟಿ.ಒ ಕಚೇರಿಗಳಲ್ಲಿ ಐಷಾರಾಮಿ ಕಾರುಗಳ ನೋಂದಣಿಯಲ್ಲಿ ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ, ನಿಜವಾದ ವಾಹನದ ಮೌಲ್ಯವನ್ನು ಮರೆಮಾಚಿ ರಿಜಿಸ್ಟ್ರೇಷನ್ ಮಾಡಿರುವುದು, ಮಾಡುವುದು ಸರ್ಕಾರದ ಗಮನಕ್ಕೆ ಬಂದಲ್ಲಿ ನಿರ್ಧಾಕ್ಷಿಣ್ಯ ಕ್ರಮ ಜರುಗಿಸುವುದಾಗಿ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಎಚ್ಚರಿಕೆ ನೀಡಿದ್ದಾರೆ.

ವಿಧಾನ ಪರಿಷತ್ತಿನಲ್ಲಿ ಪ್ರತಿಕ್ರಿಯಿಸಿದ ಸಚಿವರು, ಮಂಗಳೂರು ಮತ್ತು ಉಡುಪಿ ಆರ್.ಟಿ.ಒ ಕಛೇರಿಗಳಲ್ಲಿ ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ, ಕಾರಿನ ನಿಜವಾದ ಮೌಲ್ಯವನ್ನು ಮರೆಮಾಚಿ, ಸರ್ಕಾರದ ಬೊಕ್ಕಸಕ್ಕೆ ನಷ್ಟವುಂಟು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಕಛೇರಿಯ ಕೇಂದ್ರ ಸ್ಥಾನೀಯ ಸಹಾಯಕರು, ಅಧೀಕ್ಷಕರು ಮತ್ತು ಪ್ರಥಮ ದರ್ಜೆ ಸಹಾಯಕರು ಹಾಗೂ ಉಡುಪಿ ಕಛೇರಿಯ ಅಧೀಕ್ಷಕರನ್ನು ಸೇವೆಯಿಂದ ಅಮಾನತ್ತುಗೊಳಿಸಲಾಗಿದೆ. ಈ ಸಂಬಂಧ ಇಲಾಖಾ ವಿಚಾರಣೆ ಜಾರಿಯಲ್ಲಿರುತ್ತದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೆÇಲೀಸರ ಪ್ರಸ್ತಾವನೆಯ ಮೇರೆಗೆ ಉಡುಪಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ವಿರುದ್ಧ ವಿಚಾರಣೆ, ತನಿಖೆ ಕೈಗೊಳ್ಳಲು ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆಯ ಕಲಂ 17(ಎ) ಅನ್ವಯ ಪೂರ್ವಾನುಮತಿಯನ್ನು ಸಹ ನೀಡಲಾಗಿರುತ್ತದೆ ಎಂದು ಮಾಹಿತಿ ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular