ವಿಶ್ವಕರ್ಮ ದೇವರ ರೂಪದಲ್ಲಿರುವ ಮೋದಿ ಫೋಟೋಗೆ ರುದ್ರಾಭಿಷೇಕ, ಪೂಜೆ, ಮಂತ್ರಘೋಷ | VIDEO VIRAL

ಪ್ರಧಾನಿ ಮೋದಿಯವರ ಭಾವಚಿತ್ರವನ್ನು ವಿಶ್ವಕರ್ಮ ದೇವರ ರೂಪದಲ್ಲಿ ನಿರ್ಮಿಸಿ ಪೂಜಿಸಿದ ಕಾರ್ಯಕರ್ತರು ರುದ್ರಾಭಿಷೇಕ ಮಾಡಿದ್ದಾರೆ. ಈ ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಅಂದ ಹಾಗೇ ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯವರ 74ನೇ ಹುಟ್ಟುಹಬ್ಬ. ಈ ಅಂಗವಾಗಿ ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಬಿಜೆಪಿ ನಾಯಕರು ರಕ್ತದಾನ ಶಿಬಿರವನ್ನು ಆಯೋಜಿಸಿದ್ದರು. ಬಿಜೆಪಿ ರಾಜ್ಯ ಕಚೇರಿಯಲ್ಲಿ ಆಯೋಜಿಸಿದ್ದ ಈ ಕಾರ್ಯಕ್ರಮವನ್ನು ಬಿಜೆಪಿ ರಾಜ್ಯ ಮುಖ್ಯಸ್ಥ ದಿಲೀಪ್ ಜೈಸ್ವಾಲ್, ಉಪ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ, ಉಪ ಮುಖ್ಯಮಂತ್ರಿ ವಿಜಯ್ ಸಿನ್ಹಾ ಉದ್ಘಾಟಿಸಿದರು.

ಹರ್ಷಗೊಂಡ ಕಾರ್ಯಕರ್ತರಿಂದ ಹಾಲಿನ ಅಭಿಷೇಕ.

ಪ್ರಧಾನಿ ಮೋದಿಯವರ ಹುಟ್ಟುಹಬ್ಬವನ್ನು ಬಿಜೆಪಿ ಕಾರ್ಯಕರ್ತರು ಸಂಭ್ರಮದಿಂದ ಆಚರಿಸಿದ್ದಾರೆ. ಈ ನಡುವೆ ರಾಜಧಾನಿ ಪಾಟ್ನಾದಿಂದ ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ವಿಡಿಯೋದಲ್ಲಿ ಬಿಜೆಪಿ ಕಾರ್ಯಕರ್ತರು ವಿಶ್ವಕರ್ಮ ದೇವರ ರೂಪದಲ್ಲಿ ಪ್ರಧಾನಿ ಮೋದಿಯವರ ಫೋಟೋ ಇಟ್ಟು ಪೂಜಿಸುತ್ತಿದ್ದಾರೆ. ಪಾಟ್ನಾದ ವೇದಶಾಲೆಯಲ್ಲಿ ಈ ಘಟನೆ ನಡೆದಿದ್ದು, ಬಿಜೆಪಿ ನಾಯಕ ಕೃಷ್ಣ ಸಿಂಗ್ ಕಲ್ಲು ನೇತೃತ್ವದಲ್ಲಿ ಪ್ರಧಾನಿ ಮೋದಿಯನ್ನು ವಿಶ್ವಕರ್ಮ ದೇವರಂತೆ ಪೂಜಿಸಲಾಗಿದೆ. ಈ ವೇಳೆ ಜನರು ಪ್ರಧಾನಿ ಮೋದಿ ಅವರ ಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿ, ತಿಲಕ ಹಚ್ಚಿ ಆರತಿ ಬೆಳಗಿ ಮಂತ್ರಘೋಷ ಹೇಳಿದ್ದಾರೆ.

ಪ್ರಧಾನಿ ಮೋದಿಯವರು 17 ಸೆಪ್ಟೆಂಬರ್ 1950 ರಂದು ಗುಜರಾತ್ನ ವಡ್ನಗರದಲ್ಲಿ ಜನಿಸಿದರು. ಆರ್‌ಎಸ್‌ಎಸ್ ನಲ್ಲಿ ಕಾರ್ಯನಿರ್ವಹಿಸಿ ಬಿಜೆಪಿಗೆ ಬಂದರು. ರಾಷ್ಟ್ರ ರಾಜಕಾರಣದಲ್ಲಿ ಸಕ್ರಿಯರಾಗುವ ಮೊದಲು ಪ್ರಧಾನಿ ಮೋದಿ ಅವರು ಸತತ 13 ವರ್ಷಗಳ ಕಾಲ ಗುಜರಾತ್ ಸಿಎಂ ಆಗಿದ್ದರು. ಕಳೆದ 10 ವರ್ಷಗಳಿಂದ ಪ್ರಧಾನಿಯಾಗಿ ದೇಶವನ್ನು ಮುನ್ನಡೆಸುತ್ತಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read