HomeKarnatakaಸಿಐಡಿ ಅಧಿಕಾರಿ ತಳ್ಳಿ ಪಿಎಸ್ಐ ಹಗರಣದ ಕಿಂಗ್ ಪಿನ್ ರುದ್ರಗೌಡ ಪಾಟೀಲ್ ಪರಾರಿ

ಸಿಐಡಿ ಅಧಿಕಾರಿ ತಳ್ಳಿ ಪಿಎಸ್ಐ ಹಗರಣದ ಕಿಂಗ್ ಪಿನ್ ರುದ್ರಗೌಡ ಪಾಟೀಲ್ ಪರಾರಿ

ಕಲಬುರಗಿ: ಪಿಎಸ್ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ರುದ್ರಗೌಡ ಪಾಟೀಲ್ ಪರಾರಿಯಾಗಿದ್ದಾನೆ. ರಾತ್ರಿ ಸಿಐಡಿ ಅಧಿಕಾರಿಯನ್ನು ತಳ್ಳಿದ ರುದ್ರಗೌಡ ಪಾಟೀಲ್ ಪರಾರಿಯಾಗಿದ್ದು, ದೂರು ದಾಖಲಾಗಿದೆ.

ಪಿಎಸ್ಐ ನೇಮಕಾತಿ ಪರೀಕ್ಷಾ ಹಗರಣದ ಕಿಂಗ್ ಪಿನ್ ಆಗಿರುವ ರುದ್ರಗೌಡ ನಿನ್ನೆ ಕಲಬುರ್ಗಿ ನಗರದ ಅಕ್ಕಮಹಾದೇವಿ ಕಾಲೋನಿಯಲ್ಲಿರುವ ಮನೆಯಿಂದ ಎಸ್ಕೇಪ್ ಆಗಿದ್ದಾನೆ. ತುಮಕೂರು ಠಾಣೆಯಲ್ಲಿ ರುದ್ರಗೌಡ ವಿರುದ್ಧ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ವಶಕ್ಕೆ ಪಡೆಯಲು ಸಿಐಡಿ ಅಧಿಕಾರಿಗಳು ಬಂದಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿಐಡಿ ಪಿಎಸ್ಐ ಆನಂದ್ ಅವರು ಪಾಟೀಲ್ ನನನ್ಉ ವಶಕ್ಕೆ ಪಡೆಯಲು ಮುಂದಾಗುತ್ತಿದ್ದಂತೆ ಅವರನ್ನು ತಳ್ಳಿದ ಪರಾರಿಯಾಗಿದ್ದಾನೆ. ಈ ಬಗ್ಗೆ ಸಿಐಡಿ ಪಿಎಸ್ಐ ಆನಂದ್ ಕಲಬುರ್ಗಿ ಅಶೋಕನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನಿನ್ನೆ ರುದ್ರಗೌಡ ಪಾಟೀಲನ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಆತನನ್ನು ವಶಕ್ಕೆ ಪಡೆಯಲು ಸಿಐಡಿ ಅಧಿಕಾರಿಗಳು ಬಂದಿದ್ದರು. ಜಾಮೀನು ಪಡೆದ ಬಳೆಕ ರುದ್ರಗೌಡ ವಿಚಾರಣೆಗೆ ನಿರಂತರವಾಗಿ ಗೈರು ಹಾಜರಾಗಿದ್ದ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular