HomeKarnatakaBIG BREAKING : ವಿಧಾನಸಭೆ ಉಪಾಧ್ಯಕ್ಷರಾಗಿ ಶಾಸಕ `ರುದ್ರಪ್ಪ ಲಮಾಣಿ’ ಅವಿರೋಧ ಆಯ್ಕೆ

BIG BREAKING : ವಿಧಾನಸಭೆ ಉಪಾಧ್ಯಕ್ಷರಾಗಿ ಶಾಸಕ `ರುದ್ರಪ್ಪ ಲಮಾಣಿ’ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯ ಉಪಾಧ್ಯಕ್ಷರಾಗಿ ಹಾವೇರಿಯ ಕಾಂಗ್ರೆಸ್‌ ಶಾಸಕ ರುದ್ರಪ್ಪ ಲಮಾಣಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ವಿಧಾನಸಭೆಯ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಿಗದಿಯಾಗಿತ್ತು, ಈ ಸ್ಥಾನಕ್ಕೆ ಕಾಂಗ್ರೆಸ್‌ನ ಹಾವೇರಿ ಶಾಸಕ ರುದ್ರಪ್ಪ ಲಮಾಣಿ ಅವರನ್ನು ಅಭ್ಯರ್ಥಿಯಾಗಿ ಕಾಂಗ್ರೆಸ್ ಕಣಕ್ಕಿಳಿಸಿತ್ತು.ನಿನ್ನೆ  ವಿಧಾನಸಭೆಯ ಉಪಾಧ್ಯಕ್ಷ ಸ್ಥಾನಕ್ಕೆ ಹಾವೇರಿಯ ಶಾಸಕ ರುದ್ರಪ್ಪ ಲಮಾಣಿ ಅವರು ನಿನ್ನೆಯಷ್ಟೇ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದರು.ಇಂದು ವಿಧಾನಸಭೆ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ರುದ್ರಪ್ಪ ಲಮಾಣಿ ಅವರಿಗೆ ಸಚಿವ ಸ್ಥಾನ ಕೊನೆಘಳಿಗೆಯಲ್ಲಿ ಕೈ ತಪ್ಪಿತ್ತು. ಈ ಹಿನ್ನೆಲೆಯಲ್ಲಿ ಅವರಿಗೆ ಉಪಾಧ್ಯಕ್ಷ ಸ್ಥಾನ ನೀಡಲು ಕಾಂಗ್ರೆಸ್ ತೀರ್ಮಾನಿಸಿತ್ತು. ಅದರಂತೆ ರುದ್ಪಪ್ಪ ಲಮಾಣಿ ಅವರು ವಿಧಾನಸಭೆಯ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular