HomeKarnatakaನಗರದ ವಿದ್ಯಾರ್ಥಿಗಳಿಗೆ ಗ್ರಾಮೀಣ ಜೀವನ ಬಗ್ಗೆ ಕಲಿಕೆ: ‘ಗ್ರಾಮಾನುಭವ’ ಯೋಜನೆ ಜಾರಿಗೆ ಸರ್ಕಾರ ಆದೇಶ

ನಗರದ ವಿದ್ಯಾರ್ಥಿಗಳಿಗೆ ಗ್ರಾಮೀಣ ಜೀವನ ಬಗ್ಗೆ ಕಲಿಕೆ: ‘ಗ್ರಾಮಾನುಭವ’ ಯೋಜನೆ ಜಾರಿಗೆ ಸರ್ಕಾರ ಆದೇಶ

ಬೆಂಗಳೂರು: ನಗರದ ವಿದ್ಯಾರ್ಥಿಗಳಿಗೆ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಕಲೆ ಮತ್ತು ಸಂಸ್ಖೃತಿ ಸೇರಿದಂತೆ ಗ್ರಾಮೀಣ ಜೀವನದ ವಿಶಿಷ್ಟ ಅನುಭವ ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ʻಗ್ರಾಮಾನುಭವʼ ಎಂಬ ಕಾರ್ಯಕ್ರಮ ಜಾರಿಗೆ ತಂದು ಆದೇಶ ಹೊರಡಿಸಿದೆ. ರಾಜ್ಯದ ಜಿಲ್ಲಾ ಕೇಂದ್ರಗಳ ವ್ಯಾಪ್ತಿಯಲ್ಲಿರುವ ನಗರ ಪ್ರದೇಶದ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 8ನೇ, 9ನೇ ಮತ್ತು 11 ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಈ ಯೋಜನೆ ರೂಪಿಸಲಾಗಿದೆ.

ರಾಜ್ಯದ ಒಟ್ಟು 160 ಸರ್ಕಾರಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಅಂದಾಜು 246.07 ಲಕ್ಷ ರೂ. ವೆಚ್ಚದಲ್ಲಿ ಈ ಯೋಜನೆಯನ್ನು ಅನುಷ್ಠಾನಕ್ಕೆ ತರಲಾಗುತ್ತಿದೆ. ನಗರ ಪ್ರದೇಶದ ಪಿಎಂಶ್ರೀ ಮತ್ತು ಕೆಪಿಎಸ್‌ ಶಾಲೆಗಳಲ್ಲಿಯೂ ಈ ಯೋಜನೆ ಜಾರಿಗೆ ಬರಲಿದೆ.

ನಗರ ಪ್ರದೇಶದ ಶಾಲಾ ವಿದ್ಯಾರ್ಥಿಗಳಿಗೆ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಕಲೆ ಮತ್ತು ಸಂಸ್ಕೃತಿಯ ಅಂಶಗಳನ್ನು ಒಳಗೊಂಡಂತೆ ವಿಶಿಷ್ಟ ಗ್ರಾಮೀಣ ಜೀವನ ಪರಿಚಯ ಕಾರ್ಯಕ್ರಮ ‘ಗ್ರಾಮಾನುಭವ’ ಅನುಷ್ಠಾನಕ್ಕೆ ಅನುಮೋದನೆ ನೀಡುವ ಬಗ್ಗೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಸ್ತಾವನೆ:

ಮೇಲೆ ಓದಲಾದ ಕ್ರಮಾಂಕ (1) ರಲ್ಲಿ ದಿನಾಂಕ: 02-07-2026ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ “ಮೊದಲ 100 ದಿನಗಳು: ಆಡಳಿತ, ಅಭಿವೃದ್ಧಿ ಮತ್ತು ಒಳಗೊಳ್ಳುವಿಕೆಗೆ” (“ಮೊದಲ 100 ದಿನಗಳು: ಆಡಳಿತ, ಅಭಿವೃದ್ಧಿ ಮತ್ತು ಒಳಗೊಳ್ಳುವಿಕೆಗಾಗಿ ಕಾರ್ಯಸೂಚಿ”) ಕುರಿತು ಅನುಮೋದನೆಯನ್ನು ನೀಡಲಾಗಿದ್ದು, “ಹಂತ 3: ಶಾಲಾ ಶಿಕ್ಷಣ ಮತ್ತು ಕಲಿಕಾ ಶ್ರೇಷ್ಠತೆ” ಅಡಿಯಲ್ಲಿ ಈ ಕೆಳಕಂಡ ಯೋಜನೆಯನ್ನು ಅನುಷ್ಠಾನಗೊಳಿಸಲು ಸೂಚಿಸಲಾಗಿದೆ.

“ಗ್ರಾಮಾನುಭವ ಕೃಷಿಭೂಮಿ ಮತ್ತು ಗ್ರಾಮೀಣ ಜೀವನದ ಅನುಭವ ಕಾರ್ಯಕ್ರಮ”: ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಗ್ರಾಮೀಣ ಜೀವನದ ನೈಜ ಅನುಭವವನ್ನು ಒದಗಿಸುವ ಉದ್ದೇಶದಿಂದ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಈ ರೀತಿಯ ಕಾರ್ಯಕ್ರಮಗಳನ್ನು ಪಠ್ಯಕ್ರಮದ ಭಾಗವಾಗಿ ಪರಿಚಯಿಸುವ ಮೂಲಕ ‘ಗ್ರಾಮಾನುಭವ’ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುವುದು. ‘ಗ್ರಾಮಾನುಭವ’ ಕಾರ್ಯಕ್ರಮದಡಿ ವಿದ್ಯಾರ್ಥಿಗಳನ್ನು ಗ್ರಾಮೀಣ ಪ್ರದೇಶಗಳಿಗೆ ಕರೆದೊಯ್ದು ಒಂದು ರಾತ್ರಿ ಹಾಗೂ ಎರಡು ದಿನಗಳ ವಾಸ್ತವ್ಯ ಕಲ್ಪಿಸಲಾಗುವುದು. ಈ ಮೂಲಕ ವಿದ್ಯಾರ್ಥಿಗಳು ಗ್ರಾಮೀಣ ಜೀವನಶೈಲಿಯನ್ನು ನೇರವಾಗಿ ಅನುಭವಿಸುವುದರ ಜೊತೆಗೆ, ಕೃಷಿ, ಪಶುಸಂಗೋಪನೆ, ಜಾನಪದ ಕಲೆ ಮತ್ತು ಸಂಸ್ಕೃತಿಯ ಕುರಿತು ಪರಿಚಯ ಹಾಗೂ ಪ್ರಾಯೋಗಿಕ ಅರಿವು ಪಡೆಯುವಂತಾಗುತ್ತದೆ. ಈ ಕಾರ್ಯಕ್ರಮವನ್ನು 9ನೇ ಮತ್ತು ಕಡ್ಡಾಯವಾಗಿ 10 ತರಗತಿಯ ವಿದ್ಯಾರ್ಥಿಗಳಿಗೆ

ಅನುಷ್ಠಾನಗೊಳಿಸಲಾಗುವುದು.”

ಮೇಲೆ ಓದಲಾದ ಕ್ರಮಾಂಕ (2) ರಲ್ಲಿ ರಾಜ್ಯ ಯೋಜನಾ ನಿರ್ದೇಶಕರು ಸಮಗ್ರ ಶಿಕ್ಷಣ ಕರ್ನಾಟಕ ರವರು ಈ ಕೆಳಕಂಡಂತೆ ಪ್ರಸ್ತಾವನೆ ಸಲ್ಲಿಸಿರುತ್ತಾರೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಪ್ರಸ್ತುತ ಪಿಎಂಶ್ರೀ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ (SSK) ಈ ಉಪಕ್ರಮಗಳಡಿ ವಿದ್ಯಾರ್ಥಿಗಳಿಗೆ ಕ್ಷೇತ್ರ ಅಧ್ಯಯನ ಭೇಟಿಗಳನ್ನು ಮಾಡಿಸಲಾಗುತ್ತಿದೆ, ಇದರಡಿ ಕೃಷಿ ವಿಶ್ವವಿದ್ಯಾಲಯಗಳು ಮತ್ತು ಇತರ ಸಂಸ್ಥೆಗಳಿಗೆ ಭೇಟಿಗಳು ಸೇರಿವೆ.

ಇತ್ತೀಚಿನ Exposure Visit Framework ಅನ್ನು ಆಧರಿಸಿ, ಸರ್ಕಾರವು ‘ಗ್ರಾಮಾನುಭವ’ ಎಂಬ ವಿಶಿಷ್ಟ ಗ್ರಾಮೀಣ ಜೀವನ ಕ್ಷೇತ್ರ ಅಧ್ಯಯನ ಭೇಟಿ ಕಾರ್ಯಕ್ರಮವನ್ನು ನಗರ ಪ್ರದೇಶದ ವಿದ್ಯಾರ್ಥಿಗಳಿಗಾಗಿ ಜಾರಿ ಮಾಡಲು ಪ್ರಸ್ತಾಪಿಸಿದೆ. ಈ ಮೂಲಕ ಕೃಷಿ, ತೋಟಗಾರಿಕೆ, ಪಶುಪಾಲನೆ, ಕಲೆ ಮತ್ತು ಸಂಸ್ಕೃತಿ ಇತ್ಯಾದಿ ವಿಷಯಗಳನ್ನು ಸೇರಿಸಿ, ನಗರ ಪ್ರದೇಶಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಕೃಷಿ ಮತ್ತು ಸಂಬಂಧಪಟ್ಟ ಕ್ಷೇತ್ರಗಳು, ಗ್ರಾಮೀಣ ಉದ್ಯೋಗಗಳು, ನೈಸರ್ಗಿಕ ಸಂಪನ್ಮೂಲ ಸಂರಕ್ಷಣಾ ಕ್ರಮಗಳು, ಗ್ರಾಮೀಣ ಸಂಸ್ಕೃತಿ ಮತ್ತು ಸಮುದಾಯ ಜೀವನವನ್ನು ಅನುಭವಿಸುವ ವ್ಯವಸ್ಥಿತ ಅವಕಾಶವನ್ನು ನೀಡುವ ಉದ್ದೇಶ ಹೊಂದಿದೆ. ಸಂರಕ್ಷಣಾ ಕ್ರಮಗಳು, ಗ್ರಾಮೀಣ ಉತ್ಪಾದನಾ ವ್ಯವಸ್ಥೆಗಳು ಹಾಗೂ ಆಹಾರ ಭದ್ರತೆ ಮತ್ತು ಸ್ಥಿರ ಅಭಿವೃದ್ಧಿಗೆ ಕೃಷಿ ಸಮುದಾಯಗಳ ಕೊಡುಗೆಗಳನ್ನೂ ವಿದ್ಯಾರ್ಥಿಗಳು ಅರ್ಥೈಸಿಕೊಳ್ಳುತ್ತಾರೆ.

ಈ ಕಾರ್ಯಕ್ರಮದಡಿ ವಿದ್ಯಾರ್ಥಿಗಳು ಪ್ರಗತಿಶೀಲ ರೈತರ ಜಮೀನುಗಳು, ರೈತ ಉತ್ಪಾದಕರ ಸಂಸ್ಥೆಗಳು (FPOs), ಪ್ರಾತ್ಯಕ್ಷಿಕೆ ಘಟಕಗಳು ಮತ್ತು ಇತರ ಅನುಮೋದಿತ ಕ್ಷೇತ್ರಾಧಾರಿತ ಕಲಿಕೆ ಸ್ಥಳಗಳಿಗೆ ಒಂದು ದಿನದ ಗ್ರಾಮೀಣ ಕ್ಷೇತ್ರ ಅಧ್ಯಯನ ಭೇಟಿ ಮಾಡಲಿದ್ದಾರೆ. ಈ ಭೇಟಿಗಳ ಮೂಲಕ, ವಿದ್ಯಾರ್ಥಿಗಳು ಕೃಷಿ, ತೋಟಗಾರಿಕೆ, ಪಶುಪಾಲನೆ, ಮಣ್ಣು ಮತ್ತು ನೀರಿನ ಸಂರಕ್ಷಣಾ ಕ್ರಮಗಳು, ಗ್ರಾಮೀಣ ಉತ್ಪಾದನಾ ವ್ಯವಸ್ಥೆಗಳು ಮತ್ತು ಆಹಾರ ಭದ್ರತೆ ಹಾಗೂ ಸ್ಥಿರ ಅಭಿವೃದ್ಧಿಗೆ ರೈತ ಸಮುದಾಯದ ಕೊಡುಗೆಗಳ ಬಗ್ಗೆ ಪ್ರಾಯೋಗಿಕ ಅನುಭವ ಪಡೆಯುತ್ತಾರೆ.

ಗ್ರಾಮಾನುಭವ ಕಾರ್ಯಕ್ರಮವನ್ನು ಕರ್ನಾಟಕದಲ್ಲಿ ಜಿಲ್ಲಾ ಕೇಂದ್ರಗಳಲ್ಲಿ ಇರುವ ನಗರ ಶಾಲೆಗಳ ವಿದ್ಯಾರ್ಥಿಗಳಿಗೆ ಈ ಕೆಳಕಂಡಂತೆ ಜಾರಿಗೆ ತರಲಾಗುವುದು;

1. ಎಲ್ಲಾ ಪಿಎಂ ಶ್ರೀ ಕೆಪಿಎಸ್ ಶಾಲೆಗಳು (8, 9 ಮತ್ತು 11 ತರಗತಿಯ ವಿದ್ಯಾರ್ಥಿಗಳಿಗೆ), ಎಲ್ಲಾ ಕರ್ನಾಟಕ ಪಬ್ಲಿಕ್ ಶಾಲೆಗಳು (ಕೆಪಿಎಸ್) (9 ಮತ್ತು 11 ತರಗತಿಯ ವಿದ್ಯಾರ್ಥಿಗ), ಮತ್ತು 800 ಕ್ಕೂ ಹೆಚ್ಚು ವಿದ್ಯಾರ್ಥಿಗಳ ದಾಖಲಾತಿ ಇರುವ ಸರ್ಕಾರಿ ಶಾಲೆಗಳು ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳು (9 ಮತ್ತು 11 ತರಗತಿಯ ವಿದ್ಯಾರ್ಥಿಗಳಿಗೆ).

2. 800 ಕ್ಕೂ ಹೆಚ್ಚು ವಿದ್ಯಾರ್ಥಿಗಳ ದಾಖಲಾತಿ ಇರುವ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳು (9 ಮತ್ತು 11 ತರಗತಿಯ ವಿದ್ಯಾರ್ಥಿಗಳಿಗೆ).

(ಚಿತ್ರಕೃಪೆ: ಎಐ)

 

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular