HomeKarnatakaಗ್ರಾಮೀಣ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಆಸ್ತಿಗಳಿಗೆ 'ಖಾತಾ ಭಾಗ್ಯ' ಕಲ್ಪಿಸಲು ಮಹತ್ವದ ಕ್ರಮ ವಿಧಾನಸಭೆಯಲ್ಲಿ...

ಗ್ರಾಮೀಣ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಆಸ್ತಿಗಳಿಗೆ ‘ಖಾತಾ ಭಾಗ್ಯ’ ಕಲ್ಪಿಸಲು ಮಹತ್ವದ ಕ್ರಮ ವಿಧಾನಸಭೆಯಲ್ಲಿ ವಿಧೇಯಕ ಮಂಡನೆ

ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿರುವ ಅನದಿಕೃತ ನಿವೇಶನ, ಕಟ್ಟಡಗಳಿಗೆ ತಾತ್ಕಾಲಿಕ ಖಾತಾ ಸೌಲಭ್ಯ ಕಲ್ಪಿಸಿ ಗ್ರಾಮ ಪಂಚಾಯಿತಿ ತೆರಿಗೆ ವ್ಯಾಪ್ತಿಗೆ ತರಲು ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ.

ಈ ನಿಟ್ಟಿನಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್(ತಿದ್ದುಪಡಿ) ವಿಧೇಯಕ 2025 ಅನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿದೆ. ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಮಂಗಳವಾರ ವಿಧಾನಸಭೆಯಲ್ಲಿ ವಿಧೇಯಕ ಮಂಡಿಸಿದ್ದಾರೆ.

ಸರ್ಕಾರಿ, ಅರಣ್ಯ ಭೂಮಿ, ಸರ್ಕಾರಿ ಒಡೆತನದ ಅಥವಾ ನಿಯಂತ್ರಣ, ಸರ್ಕಾರಿ ಸಂಸ್ಥೆಗಳಿಗೆ ಸೇರಿದ ಭೂಮಿಯನ್ನು ಹೊರತುಪಡಿಸಿದ ಆಸ್ತಿಗಳಿಗೆ ತಾತ್ಕಾಲಿಕ ಖಾತಾ ನೀಡಲಾಗುವುದು. ಗ್ರಾಮ ಪಂಚಾಯಿತಿ ಮಾದರಿ ಕಟ್ಟಡ ಉಪನಿಧಿಗಳ ನಿಯಮ ಉಲ್ಲಂಘಿಸಿ ನಿರ್ಮಿಸಿದ ಕಟ್ಟಡ ಅಥವಾ ಪರಿವರ್ತನೆಯಾಗದ ಭೂಮಿ ಇಲ್ಲವೇ ಪರಿವರ್ತನೆಯಾದ ಭೂಮಿ ಆದರೆ ಕಂದಾಯ ಭೂಮಿ ಮೇಲಿನ ಅನುಮೋದಿತವಲ್ಲದ ಬಡಾವಣೆ ಅಥವಾ ನಿವೇಶನ ಕಟ್ಟಡ ಸೇರಿ ಪ್ರತಿಯೊಂದು ಕಟ್ಟಡ, ಖಾಲಿ ನಿವೇಶನಗಳಿಗೆ ಬಿ ನಮೂನೆಯ ಇ- ಖಾತಾ ಅನ್ವಯವಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಸ್ತಿ ತೆರಿಗೆ ವಿಧಿಸಿ ಸಂಗ್ರಹಿಸಲು ವಿಧೇಯಕದಲ್ಲಿ ಅವಕಾಶ ಕಲ್ಪಿಸಲಾಗಿದೆ. ತಾತ್ಕಾಲಿಕ ಖಾತೆ ಪಡೆಯಲು ಎರಡು ವರ್ಷ ಕಾಲಮಿತಿ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular