HomeKarnatakaಗ್ರಾಮೀಣ ಮಹಿಳೆಯರಿಗೆ ಗುಡ್ ನ್ಯೂಸ್: ‘ಸಾವಿತ್ರಿಬಾಯಿ ಪುಲೆ ಯೋಜನೆ’ಯಡಿ ಆರ್ಥಿಕ ಸಬಲೀಕರಣ ತರಬೇತಿ

ಗ್ರಾಮೀಣ ಮಹಿಳೆಯರಿಗೆ ಗುಡ್ ನ್ಯೂಸ್: ‘ಸಾವಿತ್ರಿಬಾಯಿ ಪುಲೆ ಯೋಜನೆ’ಯಡಿ ಆರ್ಥಿಕ ಸಬಲೀಕರಣ ತರಬೇತಿ

ಬೆಂಗಳೂರು: ರಾಜ್ಯದ ಆಯ್ದ 100 ಗ್ರಾಮ ಪಂಚಾಯಿತಿಗಳಲ್ಲಿ ಸಾವಿತ್ರಿ ಬಾಯಿ ಫುಲೆ ಮಹಿಳಾ ಸಬಲೀಕರಣ ಯೋಜನೆ ಪ್ರಾರಂಭಿಸಲು ಸರ್ಕಾರ ಕ್ರಮ ಕೈಗೊಂಡಿದೆ.

ಸಾವಿತ್ರಿ ಬಾಯಿ ಪುಲೆ ಮಹಿಳಾ ಸಬಲೀಕರಣ ಯೋಜನೆ ಅಡಿ ಸ್ವಸಹಾಯ ಗುಂಪುಗಳ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ತರಬೇತಿ ನೀಡಲಾಗುವುದು. ಪ್ರತಿ ಜಿಲ್ಲೆಯಿಂದ ಮೂರು ಗ್ರಾಮ ಪಂಚಾಯಿತಿ ಆಯ್ಕೆ ಮಾಡಲಾಗುವುದು.

2024 -25 ನೇ ಸಾಲಿನ ಬಜೆಟ್ ನಲ್ಲಿ ಘೋಷಿಸಿದಂತೆ ಮಹಿಳೆಯರ ಆಕಾಂಕ್ಷೆ ಮತ್ತು ಆಸಕ್ತಿಗಳಿಗೆ ಅನುಗುಣವಾಗಿ ಉದ್ಯೋಗ ಆಧಾರಿತ ಕೌಶಲ ತರಬೇತಿ ನೀಡಲು ಈ ಯೋಜನೆ ರೂಪಿಸಲಾಗಿದೆ. ಪ್ರತಿ ಜಿಲ್ಲೆಯಿಂದ ಮೂರು ಗ್ರಾಮ ಪಂಚಾಯಿತಿಗಳಂತೆ ಒಟ್ಟು 29 ಜಿಲ್ಲೆಗಳಿಗೆ 89 ಕೇಂದ್ರಗಳನ್ನು ಬೆಳಗಾವಿ ಜಿಲ್ಲೆಯಲ್ಲಿ 7 ಮತ್ತು ತುಮಕೂರು ಜಿಲ್ಲೆಯಲ್ಲಿ 6 ಕೇಂದ್ರಗಳು ಸೇರಿ ಒಟ್ಟು 100 ಕೇಂದ್ರಗಳನ್ನು ನರೇಗಾ ಯೋಜನೆ ಅಡಿಯಲ್ಲಿ 17.50 ಲಕ್ಷ ರೂ. ವೆಚ್ಚದಲ್ಲಿ ಕಾರ್ಯಾಗಾರ ನಡೆಸಲು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಎಲ್ಲ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular