BIG BREAKING: ಪ್ರಧಾನಿ ಮೋದಿ ಭೇಟಿ ಫಲಶ್ರುತಿ; ರಷ್ಯಾ ಸೇನೆ ಸೇರಿದ್ದ ಭಾರತೀಯರನ್ನು ತೆರವುಗೊಳಿಸಲು ಸಮ್ಮತಿ

ಮಹತ್ವದ ಬೆಳವಣಿಗೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ರಷ್ಯಾ ಭೇಟಿಯಿಂದ ಭಾರತಕ್ಕೆ ದೊಡ್ಡ ಗೆಲುವು ಲಭಿಸಿದೆ. ರಷ್ಯಾ ಸೇನೆಗೆ ನಿಯೋಜನೆಗೊಂಡಿದ್ದ ಭಾರತೀಯರನ್ನು ತಕ್ಷಣದಿಂದಲೇ ತೆರವುಗೊಳಿಸಲು ಒಪ್ಪಿಗೆ ಸೂಚಿಸಲಾಗಿದೆ.

ಎರಡು ದಿನಗಳ ಅಧಿಕೃತ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರದಂದು ರಷ್ಯಾಗೆ ಭೇಟಿ ನೀಡಿದ್ದು, ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಬಳಿ ಈ ವಿಷಯ ಪ್ರಸ್ತಾಪ ಮಾಡುವ ಮುನ್ನವೇ ಮಹತ್ವದ ನಿರ್ಧಾರ ಹೊರ ಬಿದ್ದಿದೆ.

ಪ್ರಸ್ತುತ ರಷ್ಯಾ ಹಾಗೂ ಉಕ್ರೇನ್ ನಡುವೆ ಯುದ್ಧ ನಡೆಯುತ್ತಿದ್ದು, ಹೀಗಾಗಿ ತನ್ನ ಸೇನೆಗೆ ಭಾರತೀಯ ಯೋಧರನ್ನು ರಷ್ಯಾ ನಿಯೋಜಿಸಿಕೊಂಡಿತ್ತು. ಅಲ್ಲದೆ ಯುದ್ಧದಲ್ಲಿ ಇಬ್ಬರು ಭಾರತೀಯ ಮೂಲದ ಯೋಧರು ಮೃತಪಟ್ಟಿದ್ದರು. ಹೀಗಾಗಿ ತನ್ನ ನಾಗರೀಕರನ್ನು ಉಕ್ರೇನ್ ವಿರುದ್ಧದ ಹೋರಾಟಕ್ಕೆ ನಿಯೋಜಿಸಿಕೊಳ್ಳಲು ಭಾರತ ತನ್ನ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು ಇದೀಗ ನರೇಂದ್ರ ಮೋದಿಯವರ ಭೇಟಿ ಬಳಿಕ ಭಾರತೀಯರನ್ನು ಉಕ್ರೇನ್ ವಿರುದ್ಧದ ಹೋರಾಟಕ್ಕೆ ತನ್ನ ಸೇನೆಗೆ ಸೇರಿಸಿಕೊಳ್ಳದಿರಲು ರಷ್ಯಾ ಒಪ್ಪಿಗೆ ಸೂಚಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read