ಐಪಿಎಲ್ ನಲ್ಲಿ 2000 ರನ್ ಪೂರೈಸಿದ ರುತುರಾಜ್ ಗಾಯಕ್ವಾಡ್

ನಿನ್ನೆ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಣ ರೋಮಾಂಚನಕಾರಿ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 20 ರನ್ ಗಳಿಂದ ಭರ್ಜರಿ ಜಯ ಸಾಧಿಸಿದ್ದು, ಈ ಪಂದ್ಯದಲ್ಲಿ ನಾಯಕ ರುತುರಾಜ್ ಗಾಯಕ್ವಾಡ್ 69 ರನ್ ಸಿಡಿಸುವ ಮೂಲಕ ಬೃಹತ್ ಮೊತ್ತ ದಾಖಲಿಸಲು ಸಹಕಾರಿಯಾಗಿದ್ದಾರೆ.

ಋತುರಾಜ್ ಗಾಯಕ್ವಾಡ್ ನಿನ್ನೆಯ ಪಂದ್ಯದಲ್ಲಿ  2000 ರನ್ ಗಳ ಗಡಿ ಮುಟ್ಟಿದ್ದಾರೆ. ಈ ಮೂಲಕ ಐಪಿಎಲ್ ನಲ್ಲಿ ಅತಿ ವೇಗವಾಗಿ 2000 ರನ್ ಪೂರೈಸಿರುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದುವರೆಗೂ 58 ಐಪಿಎಲ್ ಪಂದ್ಯಗಳನ್ನಾಡಿರುವ ಗಾಯಕ್ವಾಡ್ 16 ಅರ್ಧ ಶತಕ ಮತ್ತು ಒಂದು ಶತಕ ಬಾರಿಸಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ಓಪನಿಂಗ್ ಬ್ಯಾಟ್ಸ್ಮನ್ ಆಗಿರುವ ಇವರು ಈ ಬಾರಿ ನಾಯಕತ್ವ ವಹಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read