HomeKarnatakaರೈತ ವಿದ್ಯಾನಿಧಿ ಯೋಜನೆ : ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳಿಗೆ ಈ ದಾಖಲೆ ಕಡ್ಡಾಯ

ರೈತ ವಿದ್ಯಾನಿಧಿ ಯೋಜನೆ : ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳಿಗೆ ಈ ದಾಖಲೆ ಕಡ್ಡಾಯ

2023-24 ನೇ ಸಾಲಿನಲ್ಲಿ ಮುಖ್ಯಮಂತ್ರಿ ರೈತವಿದ್ಯಾನಿಧಿ ಕಾರ್ಯಕ್ರಮ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ಪಡೆಯಲು ಸಾಮಾನ್ಯ ವರ್ಗದ ವಿದ್ಯಾರ್ಥಿಗಳ ಪೋಷಕರ ಆದಾಯವು ರೂ.2.5 ಲಕ್ಷ ಮೀರಿರಬಾರದು ಎಂಬ ಷರತ್ತನ್ನು ವಿಧಿಸಿರುವುದರಿಂದ ಸಾಮಾನ್ಯ ವರ್ಗದಡಿ ಬರುವ ರೈತರ ಮಕ್ಕಳು ತಮ್ಮ ಪೋಷಕರ ಆದಾಯ ಪ್ರಮಾಣಪತ್ರವನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ವಿದ್ಯಾರ್ಥಿಗಳ ಲಾಗಿನ್‍ನಲ್ಲಿ ಸಲ್ಲಿಸಲು ಫೆ.29 ರ ವರೆಗೆ ಅವಕಾಶ ಕಲ್ಪಿಸಲಾಗಿದೆ

ಮುಖ್ಯಮಂತ್ರಿ ರೈತವಿದ್ಯಾನಿಧಿ ಕಾರ್ಯಕ್ರಮದಡಿ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಕಾರ್ಯಕ್ರಮದಡಿ ಹೊಸದಾಗಿ ಸ್ವೀಕೃತವಾಗುವ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಆದಾಯ ಪ್ರಮಾಣ ಪತ್ರವನ್ನು ಸಲ್ಲಿಸಲು ಸರ್ಕಾರದ ಆದೇಶದಂತೆ ಕೊನೆಯ ದಿನಾಂಕವನ್ನು ನಿಗಧಿಪಡಿಸಲಾಗಿರುತ್ತದೆ.

2023-24ನೇ ಸಾಲಿನಲ್ಲಿ ಇತರೆ ಇಲಾಖೆಗಳ (ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಇತರೆ ಇಲಾಖೆಗಳು) ಯೋಜನೆಯಡಿ ವಿದ್ಯಾರ್ಥಿ ವೇತನ ಪಡೆಯುತ್ತಿರುವ ವಿದ್ಯಾರ್ಥಿಗಳು ಮುಖ್ಯಮಂತ್ರಿ ರೈತವಿದ್ಯಾನಿಧಿ ಕಾರ್ಯಕ್ರಮ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಕಾರ್ಯಕ್ರಮದಡಿ ವಿದ್ಯಾರ್ಥಿ ವೇತನ ಪಡೆಯಲು ಅರ್ಹರಾಗುವುದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2023-24ನೇ ಸಾಲಿನಲ್ಲಿ ಮುಖ್ಯಮಂತ್ರಿ ರೈತವಿದ್ಯಾನಿಧಿ ಕಾರ್ಯಕ್ರಮ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ಪಡೆಯಲು ಸಾಮಾನ್ಯ ವರ್ಗದ ವಿದ್ಯಾರ್ಥಿಗಳ ಪೋಷಕರ ಆದಾಯವು ರೂ.2.50 ಲಕ್ಷ ಮೀರಿರಬಾರದು ಎಂಬ ಷರತ್ತನ್ನು ವಿಧಿಸಿರುವುದರಿಂದ ಸಾಮಾನ್ಯ ವರ್ಗದಡಿ ಬರುವ ರೈತರ ಮಕ್ಕಳು ತಮ್ಮ ಪೋಷಕರ ಆದಾಯ ಪ್ರಮಾಣ ಪತ್ರವನ್ನು ಸಲ್ಲಿಸಲು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ (ಎಸ್‍ಎಸ್‍ಪಿ) ವಿದ್ಯಾರ್ಥಿಗಳ ಲಾಗಿನ್‍ನಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಫೆಬ್ರವರಿ, 29 ರೊಳಗೆ ಪ್ರಮಾಣ ಪತ್ರವನ್ನು ಅಪ್‍ಲೋಡ್ (upload) ಮಾಡುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular