HomeInternationalBREAKING NEWS: ವಿದೇಶಾಂಗ ಸಚಿವ ಜೈಶಂಕರ್ ಮೇಲೆ ಖಲಿಸ್ತಾನಿ ಉಗ್ರರಿಂದ ದಾಳಿಗೆ ಯತ್ನ

BREAKING NEWS: ವಿದೇಶಾಂಗ ಸಚಿವ ಜೈಶಂಕರ್ ಮೇಲೆ ಖಲಿಸ್ತಾನಿ ಉಗ್ರರಿಂದ ದಾಳಿಗೆ ಯತ್ನ

ವಿದೇಶಾಂಗ ಸಚಿವ ಎಸ್.ಜೈಶಂಕರ್ ಲಂಡನ್ ಗೆ ಭೇಟಿ ನೀಡಿದ್ದ ವೇಳೆ ಉಗ್ರರು ಅವರ ಮೇಲೆ ದಾಳಿ ನಡೆಸಲು ಯತ್ನಿಸಿರುವ ಘಟನೆ ನಡೆದಿದೆ.

ಸಚಿವ ಜೈಶಂಕರ್ ಲಂಡನ್ ನಲ್ಲಿ ಚೆವನಿಂಗ್ ಹೌಸ್ ನಲ್ಲಿ ನಡೆದ ಕರ್ಯಕ್ರಮದಿಂದ ಹೊರಬರುತ್ತಿದ್ದರು. ಈ ವೇಳೆ ಅವರ ಮೇಲೆ ಖಲಿಸ್ತಾನಿ ಉಗ್ರರು ದಾಳಿ ನಡೆಸಲು ಯತ್ನಿಸಿದ್ದಾರೆ.

ಪ್ರತಿಭಟನೆ ನೆಪದಲ್ಲಿ ಭದ್ರತೆ ಉಲ್ಲಂಘನೆ ಮಾಡಿ ಸಚಿವ ಜೈಶಂಕರ್ ಅವರ ಕಾರಿನ ಕಡೆಗೆ ನುಗ್ಗಿದ ಉಗ್ರನೊಬ್ಬ ದಾಳಿ ನಡೆಸಲು ಯತ್ನಿಸಿದ್ದಾನೆ. ಭಾರತದ ರಾಷ್ಟ್ರಧ್ವಜವನ್ನು ಹರಿದು ಹಾಕಿದ್ದಾನೆ ಆಕ್ರೋಶ ವ್ಯಕ್ತಪಡಿಸಿದ್ದಾನೆ. ಈ ವೇಳೆ ಪ್ರತಿಭಟನಾಕಾರ ಉಗ್ರರನ್ನು ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
RELATED ARTICLES

Most Popular