HomeKarnatakaBREAKING: ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

BREAKING: ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ವಯೋಸಹಜ ಕಾಯಿಲೆಯಿಂದ ವಿಧಿವಶರಾಗಿದ್ದ ಗಾನಕೋಗಿಲೆ ಎಸ್.ಜಾನಕಿ (88) ಅವರ ಅಂತ್ಯಕ್ರಿಯೆ ಮೈಸೂರಿನ ಕಣಿಯನಹುಂಡಿ ಗ್ರಾಮದ ಫಾರ್ಮ್ ಹೌಸ್ ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಶನಿವಾರ ಸಂಜೆ 7:30ಕ್ಕೆ ಎಸ್.ಜಾನಕಿ ಕೊನೆಯುಸಿರೆಳೆದಿದ್ದರು. ಮೈಸೂರಿನಲ್ಲಿಯೇ ತಮ್ಮ ಜೀವನದ ಕೊನೆ ದಿನಗಳನ್ನು ಕಳೆಯಬೇಕು, ಮೈಸೂರಿನಲ್ಲಿಯೇ ಕೊನೆಯಾಗಬೇಕು ಎಂಬುದು ಆಸೆಯಾಗಿತ್ತು. ಅದರಂತೆ ಮೈಸೂರಿನ ಹೆಚ್.ಡಿ.ಕೋಟೆ ತಾಲೂಕಿನ ಕಣಿಯನಹುಂಡಿ ಗ್ರಾಮದ ಫಾರ್ಮ್ ಹೌಸ್ ನಲ್ಲಿ ಎಸ್.ಜಾನಕಿ ಅವರ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಇದಕ್ಕೂ ಮುನ್ನ ಇಂದು ಬೆಳಿಗ್ಗೆ 8 ಗಂಟೆಯಿಂದ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಎಸ್.ಜಾನಕಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಮಧ್ಯಾಹ್ನ 3 ಗಂಟೆಯವರೆಗೆ ಅಪಾರ ಅಭಿಮಾನಿಗಳು, ಸಂಗೀತ ದಿಗ್ಗಜರು, ಸಿನಿ ತಾರೆಯರು, ರಾಜಕೀಯ ನಾಯಕರು, ಗಣ್ಯಾತಿ ಗಣ್ಯರು ಗಾನಕೋಗಿಲೆಯ ಅಂತಿಮದರ್ಶನ ಪಡೆದು ನಮನ ಸಲ್ಲಿಸಿದರು. ಮಧ್ಯಾಹ್ನ ಮೂರು ಗಂಟೆ ಬಳಿಕ ಮಹಾರಾಜ ಕಾಲೇಜು ಮೈದಾನದಿಂದ ಎಸ್.ಜಾನಕಿ ಅವರ ಅಂತಿಮ ಯಾತ್ರೆ ಆರಂಭವಾಯಿತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಸ್.ಜಾನಕಿ ಅವರ ಭಾವಚಿತ್ರವಿರುವ ವಾಹನದಲ್ಲಿ ಅವರ ಪಾರ್ಥೀವಶರೀರವಿಟ್ಟು ಕಣಿಯನಹುಂಡಿಯವರೆಗೆ ಅಂತಿಮ ಯಾತ್ರೆ ಸಾಗಿತು. ದಾರಿಯುದ್ದಕ್ಕೂ ಅಪಾರ ಸಂಖ್ಯೆಯ ಅಭಿಮಾನಿಗಳು ಸಾಗಿದರು. ಬಳಿಕ ಕಣಿಯನಹುಂಡಿಯಲ್ಲಿ ರಮೇಶ್ ಶರ್ಮಾ ಮಾರ್ಗದರ್ಶನದಲ್ಲಿ ಮೊಮ್ಮಗಳು ಅಪ್ಸರಾ ಅಂತಿಮ ವಿಧಿ-ವಿಧಾನಗಳನ್ನು ನೆರವೇರಿಸಿದರು.

ಬಳಿಕ ಮೈಸೂರು ಜಿಲ್ಲಾಡಳಿತದಿಂದ ಪೊಲೀಸ್ ಗೌರವ ಸಲ್ಲಿಸಲಾಯಿತು. ಮೂರು ಸುತ್ತು ಕುಶಾಲತೋಪು ಸಿಡಿಸಿ ಪೊಲೀಸರು ಗೌರವ ನಮನ ಸಲ್ಲಿಸಿದರು. ಬಳಿಕ ಬ್ರಾಹ್ಮಣ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಮಂತ್ರ ಘೋಷಗಳ ಪಠಣೆ ಬಳಿಕ ಎಸ್.ಜಾನಕಿ ಅವರ ಪಾರ್ಥೀವ ಶರೀರಕ್ಕೆ ಮೊಮ್ಮಗಳು ಅಪ್ಸರಾ ಅವರಿಂದ ಅಗ್ನಿಸ್ಪರ್ಶ ಮಾಡಲಾಯಿತು. ಗಾನಕೋಗಿಲೆ ಎಸ್.ಜಾನಕಿ ಪಂಚಭೂತಗಳಲ್ಲಿ ಲೀನರಾದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular