HomeKarnatakaBREAKING: ಮೈಸೂರಿನಲ್ಲಿಯೇ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ ಎಸ್.ಜಾನಕಿ ಅಂತ್ಯಕ್ರಿಯೆ

BREAKING: ಮೈಸೂರಿನಲ್ಲಿಯೇ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ ಎಸ್.ಜಾನಕಿ ಅಂತ್ಯಕ್ರಿಯೆ

ಮೈಸೂರು: ಗಾನ ಕೋಗಿಲೆ ಎಸ್.ಜಾನಕಿ ಅವರು ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಯಿಂದ ಬಳಲುತ್ತಿದ್ದ ಅವರು ಬಹುಅಂಗಾಂಗ ವೈಫಲ್ಯಕ್ಕೀ ತುತ್ತಾಗಿದ್ದರು. ಇಂದು ಚಿಕಿತ್ಸೆ ಪಡೆಯುತ್ತಿರುವಾಗಲೇ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಹಿರಿಯ ಗಾಯಕಿ ಎಸ್.ಜಾನಕಿ ಅವರ ನಿಧನ ಹಿನ್ನೆಲೆಯಲ್ಲಿ ಮೈಸೂರಿನ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ, ಎಸ್.ಜಾನಕಿ ಅವರ ಅಂತಿಮ ದರ್ಶನ ಪಡೆದರು. ಅವರ ಕುಟುಂಬ ಸದಸ್ಯರಿಗೆ ಸಂತ್ವನ ಹೇಳಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಮೈಸೂರಿನಲ್ಲಿಯೇ ಅಂತ್ಯಕ್ರಿಯೆ ನಡೆಯಬೇಕು ಎಂಬುದು ಎಸ್.ಜಾನಕಿಯವರ ಕೊನೆಯಾಸೆಯಾಗಿತ್ತಂತೆ. ಈ ಬಗ್ಗೆ ಅವರ ಕುಟುಂಬ ಸದಸ್ಯರು ತಿಳಿಸಿದ್ದಾರೆ. ಹಾಗಾಗಿ ಮೈಸೂರಿನ ಅವರ ಫಾರ್ಮ್ ಹೌಸ್ ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಎಸ್.ಜಾನಕಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಎಸ್.ಜಾನಕಿ ಅವರ ಅಂತಿಮ ದರ್ಶನಕ್ಕೆ ಮೈಸೂರಿನ ಮಹಾರಾಜಾ ಕಾಲೇಜು ಮೈದಾನದಲ್ಲಿ ವ್ಯವಸ್ಥೆ ಮಾಡಲಾಗುವುದು. ಜಾನಕಿ ಅಮ್ಮನವರ ಅಂತಿಮ ದರ್ಶನ ಪಡೆಯಲು ಹೊರ ರಾಜ್ಯಗಳಿಂದ ಗಣ್ಯಾತಿ ಗಣ್ಯರು, ಅಭಿಮಾನಿಗಳು ಬರುವುದರಿಂದ ಸಕಲ ರೀತಿಯಲ್ಲಿಯೂ ಭದ್ರತಾ ವ್ಯವಸ್ಥೆ ಮಾಡಲಾಗುವುದು. ಜಿಲ್ಲಾಡಳಿತ ಕೂಡ ಎಲ್ಲಾ ವ್ಯವಸ್ಥೆಗಳನ್ನು ಮಾಡಲಿದೆ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಂತ್ಯಕ್ರಿಯೆ ಸಮಯದ ಬಗ್ಗೆ ಅವರ ಕುಟುಂಬ ಸದಸ್ಯರು ನಿರ್ಧರಿಸಲಿದ್ದಾರೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಮೈಸೂರಿನಲ್ಲಿಯೇ ಅಂತ್ಯಕ್ರಿಯೆ ನೆರವೇರಲಿದೆ ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular