ಬೆಂಗಳೂರು : ಪದ್ಮಭೂಷಣ ಪುರಸ್ಕೃತ ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ (94) ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ .
ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ ”ಕನ್ನಡ ಸಾರಸ್ವತ ಲೋಕದ ಹಿರಿಯ ಬರಹಗಾರರಾದ ಎಸ್.ಎಲ್.ಭೈರಪ್ಪನವರ ನಿಧನವಾರ್ತೆ ನೋವು ತಂದಿದೆ. ಭೈರಪ್ಪನವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ತಮ್ಮ ಆಪ್ತವೆನಿಸುವ ಬರಹ ಶೈಲಿಯಿಂದಾಗಿ ಅಪಾರ ಓದುಗರನ್ನು ಹೊಂದಿದ್ದ ಭೈರಪ್ಪನವರ ನಿಧನದಿಂದ ಸಾಹಿತ್ಯಲೋಕ ಬಡವಾಗಿದೆ. ಅವರ ಕುಟುಂಬವರ್ಗ ಮತ್ತು ಓದುಗ ಬಳಗಕ್ಕೆ ನನ್ನ ಸಂತಾಪಗಳು” ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

