ಮಾಜಿ ಸಿಎಂ ಬೊಮ್ಮಾಯಿ ವಿರುದ್ಧ ಬಿಜೆಪಿ ಮುಖಂಡನಿಂದಲೇ ಆಕ್ರೋಶ: ಅಂತಹವರಿಗೆ ಜವಾಬ್ದಾರಿ ಕೊಟ್ರೆ ಪಕ್ಷ ಮತ್ತೆ ನೆಲ ಕಚ್ಚಲಿದೆ ಎಂದು ಟ್ವೀಟ್

ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನ ಮತ್ತು ವಿಪಕ್ಷ ನಾಯಕರ ಸ್ಥಾನಗಳಿಗೆ ಸದ್ಯದಲ್ಲೇ ನೇಮಕಾತಿ ನಡೆಯುವ ಸಾಧ್ಯತೆಯಿದ್ದು, ವಿರೋಧ ಪಕ್ಷದ ನಾಯಕರ ಸ್ಥಾನಕ್ಕೆ ಹಲವರ ಹೆಸರು ಕೇಳಿ ಬಂದಿವೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ವಿಪಕ್ಷ ನಾಯಕನಾಗಿ ಆಯ್ಕೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಆದರೆ, ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಪಕ್ಷದ ಮುಖಂಡರೇ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ಎಸ್. ಲಿಂಗಮೂರ್ತಿ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ಈಗಾಗಲೇ ಕರ್ನಾಟಕ ರಾಜ್ಯದಲ್ಲಿ ಸೋತು ಸುಣ್ಣವಾಗಿರುವ ಬಿಜೆಪಿ ಪಕ್ಷ ಬಸವರಾಜ ಬೊಮ್ಮಾಯಿ ಅಂತಹ ವ್ಯಕ್ತಿಗಳಿಗೆ ಜವಾಬ್ದಾರಿ ನೀಡಿದರೆ ಮತ್ತೆ ನೆಲಕಚ್ಚುವುದು ಖಚಿತ ಎಂದು ತಿಳಿಸಿದ್ದಾರೆ.

https://twitter.com/SLingamurthy2/status/1685633271487492096

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read