ಕಾವೇರಿ ನದಿಯಲ್ಲಿ ಎಸ್.ಎಂ. ಕೃಷ್ಣ ಅಸ್ಥಿ ವಿಸರ್ಜನೆ

ಬೆಂಗಳೂರು: ಇತ್ತೀಚೆಗೆ ನಿಧನರಾದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಸ್ಥಿಯನ್ನು ಮೊಮ್ಮಗ ಅಮರ್ತ್ಯ ಹೆಗಡೆ ಕಾವೇರಿ ನದಿಯಲ್ಲಿ ವಿಸರ್ಜನೆ ಮಾಡಿದ್ದಾರೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯಲ್ಲಿ ಎಸ್.ಎಂ. ಕೃಷ್ಣ ಅಸ್ತಿ ವಿಸರ್ಜನೆ ಮಾಡಿ ಅಂತಿಮ ವಿಧಿ ವಿಧಾನ ನೆರವೇರಿಸಲಾಗಿದೆ. ಬೆಂಗಳೂರು ಸದಾಶಿವನಗರದ ನಿವಾಸದಲ್ಲಿ ಹೃದಯಾಘಾತದಿಂದ ಡಿಸೆಂಬರ್ 10ರಂದು ಎಸ್.ಎಂ. ಕೃಷ್ಣ ವಿಧಿವಶರಾಗಿದ್ದರು. ಅವರ ಹುಟ್ಟೂರು ಮದ್ದೂರು ತಾಲೂಕಿನ ಸೋಮನಹಳ್ಳಿ ಹೊರವಲಯದಲ್ಲಿರುವ ಕಾಫಿ ಡೇ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗಿತ್ತು. ಅವರ ನಿಧನದ ಹಿನ್ನಲೆಯಲ್ಲಿ ಡಿ. 11 ರಂದು ಸರ್ಕಾರಿ ರಜೆ, ಮೂರು ದಿನ ಶೋಕಾಚರಣೆ ಘೋಷಿಸಲಾಗಿತ್ತು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read