BREAKING: ಸೊಸೆಗೆ ವರದಕ್ಷಿಣೆ ಕಿರುಕುಳ ಆರೋಪ: ಪೊಲೀಸರ ನೋಟಿಸ್ ಗೆ ಕ್ಯಾರೆ ಎನ್ನದ ಎಸ್.ನಾರಾಯಣ್ ಕುಟುಂಬ

ಬೆಂಗಳೂರು: ಸೊಸೆಗೆ ವರದಕ್ಷಿಣೆ ಕಿರುಕುಳ ನೀಡಿರುವ ಆರೋಪ ನಿರ್ದೇಶಕ ಎಸ್.ನಾರಾಯಣ್ ಹಾಗೂ ಕುಟುಂಬದ ವಿರುದ್ಧ ಕೇಳಿಬಂದಿದ್ದು, ಎಸ್.ನಾರಾಯಣ್ ಪುತ್ರ ಪವನ್ ಪತ್ನಿ ಪವಿತ್ರಾ ಈ ಬಗ್ಗೆ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ವರದಕ್ಷಿಣೆ ಕಿರುಕುಳ ಆರೋಪ ಹಿನ್ನೆಲೆಯಲ್ಲಿ ಎಸ್.ನಾರಾಯಣ್, ಪತ್ನಿ ಭಾಗ್ಯವತಿ ಹಾಗೂ ಪುತ್ರ ಪವನ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಜ್ಞಾನಭಾರತಿ ಠಾಣೆ ಪೊಲೀಸರು ಎಸ್.ನಾರಾಯಣ್ ಕುಟುಂಬಕ್ಕೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.

ಆದರೆ ಎಸ್.ನಾರಾಯಣ್ ಕುಟುಂಬ ಪೊಲೀಸರ ನೋಟಿಸ್ ಗೆ ಕ್ಯಾರೆ ಎಂದಿಲ್ಲ. ಸೋಮವಾಅರವೇ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದರೂ ವಿಚಾರಣೆಗೆ ಹಾಜರಾಗಿಲ್ಲ. ಈ ಹಿನ್ನೆಲೆಯಲ್ಲಿ ಎಸ್.ನಾರಾಯಣ್ ಕುಟುಂಬಕ್ಕೆ ಮತ್ತೊಂದು ನೋಟಿಸ್ ನೀಡಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಅಲ್ಲದೇ ಸೊಸೆ ಪವಿತ್ರಾ ಅವರಿಗೂ ಆರೋಪದ ಬಗ್ಗೆ ಸಾಕ್ಷ್ಯಗಳ ದಾಖಲೆಗಳನ್ನು ನೀಡುವಂತೆ ಸೂಚಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read