ತುಮಕೂರು: ಸಚಿವ ಸಂಪುಟ ವಿಸ್ತರಣೆಯಲ್ಲಿಯೂ ತಮಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ತೀವ್ರ ಅಸಮಾಧಾನಗೊಂಡು ರಾಜೀನಾಮೆ ನೀಡುದಾಗಿ ಹೇಳಿದ್ದ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಇದೀಗ ಯುಟರ್ನ್ ಹೊಡೆದಿದ್ದಾರೆ. ರಾಜೀನಾಮೆ ವಿಚಾರದಿಂದ ಹಿಂದೆ ಸರಿದಿದ್ದಾರೆ.
ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿದ್ದ ಶಾಸಕ ಎಸ್.ಆರ್.ಶ್ರೀನಿವಾಸ್ ಕೆಎಸ್ಆರ್ಟಿಸಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದರು. ಇದರ ಬೆನ್ನಲ್ಲೇ ಎಚ್ಚೆತ್ತ ಸಿಎಂ ಡಿ.ಕೆ.ಶಿವಕುಮಾರ್, ಶ್ರೀನಿವಾಸ್ ಅವರಿಗೆ ಕರೆ ಮಾಡಿ ಮನವೊಲಿಸಿದ್ದಾರೆ. ಇದೀಗ ಶ್ರೀನಿವಾಸ್ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.
ಸಿಎಂ ಡಿ.ಕೆ.ಶಿವಕುಮಾರ್ ಕರೆ ಬಳಿಕ ಮಾತನಾಡಿದ ಶ್ರೀನಿವಾಸ್, ಕೆಎಸ್ಆರ್ಟಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಹೊರಟ್ಟಿದ್ದೆ. ಆದ್ರೆ, ಎಲ್ಲಾ ನಿಗಮ ಮಂಡಳಿಗಳನ್ನ ವಾಪಸ್ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಹೀಗಾಗಿ ರಾಜೀನಾಮೆ ಕೊಡುವ ಅವಶ್ಯಕತೆ ಇಲ್ಲ. ಇನ್ನು ನನಗೆ ಯಾವುದೇ ಅಸಮಾಧಾನ ಇಲ್ಲ ಎಂದು ತಿಳಿಸಿದ್ದಾರೆ.

