HomeLatest NewsBREAKING : ಕರ್ನಾಟಕ 'ಭೋವಿ' ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್. ರವಿಕುಮಾರ್ ರಾಜೀನಾಮೆ |S.Ravikumar Resigns

BREAKING : ಕರ್ನಾಟಕ ‘ಭೋವಿ’ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್. ರವಿಕುಮಾರ್ ರಾಜೀನಾಮೆ |S.Ravikumar Resigns

ಬೆಂಗಳೂರು : ಭೋವಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್. ರವಿಕುಮಾರ್ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಭೋವಿ ನಿಗಮದ ಫಲಾನುಭವಿಗಳಿಂದ ಕಮಿಷನ್ ವಸೂಲಿ ಆರೋಪಕ್ಕೆ ಗುರಿಯಾಗಿರುವ ನಿಗಮದ ಅಧ್ಯಕ್ಷ ಎಸ್. ರವಿಕುಮಾರ್ ಅವರಿಗೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದರು. ಸಿಎಂ ಸೂಚನೆ ಬೆನ್ನಲ್ಲೇ ಅವರು ರಾಜೀನಾಮೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಭೋವಿ ಅಭಿವೃದ್ಧಿ ನಿಗಮದಿಂದ ಸುಮಾರು 15 ಕೋಟಿ ರೂ. ವೆಚ್ಚದಲ್ಲಿ ಭೂಒಡೆತನ ಯೋಜನೆ ಜಾರಿಗೊಳಿಸಲಾಗಿದ್ದು, ಯೋಜನೆಯಡಿ 60 ಎಕರೆ ಖರೀದಿಸಿ ಫಲಾನುಭವಿಗಳಿಗೆ ಹಂಚಿಕೆ ಮಾಡಬೇಕಿತ್ತು. ಈ ಫಲಾನುಭವಿಗಳಿಂದ ಪ್ರತಿ ಘಟಕ ವೆಚ್ಛಕ್ಕೆ ಶೇಕಡ 40 ರಿಂದ 60ರಷ್ಟು ಕಮಿಷನ್ ನಿಗದಿ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಕುರಿತಾ ವಿಡಿಯೋ ವೈರಲ್ ಆಗಿದ್ದು, ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಎಸ್. ರವಿಕುಮಾರ್ ಅವರಿಗೆ ಸಿಎಂ ಸೂಚಿಸಿದ್ದರು. ತನಿಖೆಯಲ್ಲಿ ಆರೋಪ ಸಾಬೀತಾದರೆ ರಾಜೀನಾಮೆ ನೀಡುತ್ತೇನೆ ಎಂದು ಎಸ್. ರವಿಕುಮಾರ್ ಸಿಎಂಗೆ ತಿಳಿಸಿದ್ದು, ಇದನ್ನು ಒಪ್ಪದ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಸೂಚಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular