HomeAgricultureಅಡಿಕೆ ಬೆಳೆಗಾರರಿಗೆ ಬಿಗ್ ಶಾಕ್: ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 54 ಸಾವಿರ ಹೆಕ್ಟೇರ್ ಅಡಿಕೆ ಬೆಳೆ...

ಅಡಿಕೆ ಬೆಳೆಗಾರರಿಗೆ ಬಿಗ್ ಶಾಕ್: ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 54 ಸಾವಿರ ಹೆಕ್ಟೇರ್ ಅಡಿಕೆ ಬೆಳೆ ಹಾನಿ

ಬೆಳಗಾವಿ: ಎಲೆ ಚುಕ್ಕೆ ರೋಗದಿಂದ ರಾಜ್ಯದಲ್ಲಿ ಸುಮಾರು 53,977 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿರುವ ಅಡಿಕೆ ಬೆಳೆಗೆ ಹಾನಿಯಾಗಿದೆ ಎಂದು ತೋಟಗಾರಿಕೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ತಿಳಿಸಿದ್ದಾರೆ.

ಬೆಳಗಾವಿ ಅಧಿವೇಶನದಲ್ಲಿ ಮಾಹಿತಿ ನೀಡಿದ ಸಚಿವರು, ರೋಗ ಹರಡದಂತೆ ನಿಯಂತ್ರಿಸಲು ಶಿವಮೊಗ್ಗ ತೋಟಗಾರಿಕೆ ವಿಶ್ವವಿದ್ಯಾಲಯದ ತಜ್ಞರ ನೇತೃತ್ವದ ತಂಡ ರಚನೆಯಾಗಿದ್ದು, ಸಂಶೋಧನೆಗೆ 50 ಲಕ್ಷ ರೂ. ಅನುದಾನ ಒದಗಿಸಿದೆ ಎಂದು ತಿಳಿಸಿದ್ದಾರೆ.

ರೋಗದ ನಿಯಂತ್ರಣ ಕುರಿತು ಕೃಷಿ ಮತ್ತು ತೋಟಗಾರಿಕೆ ವಿಜ್ಞಾನ ವಿಶ್ವ ವಿದ್ಯಾಲಯದ ತಜ್ಞರ ಸಹಯೋಗದಲ್ಲಿ ರೈತರಿಗೆ ತರಬೇತಿ, ಪ್ರಾತ್ಯಕ್ಷಿಕೆಗಳನ್ನು ನೀಡಿ, ಮಾಹಿತಿ ಹಾಗೂ ಪ್ರಚಾರ ಕಾರ್ಯ ಮಾಡಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular