HomeKarnatakaBIG NEWS: ಸಿಎಂ ಹೇಳಿರುವುದರಲ್ಲಿ ತಪ್ಪೇನಿದೆ? ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಸಮರ್ಥನೆ

BIG NEWS: ಸಿಎಂ ಹೇಳಿರುವುದರಲ್ಲಿ ತಪ್ಪೇನಿದೆ? ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಸಮರ್ಥನೆ

ದಾವಣಗೆರೆ: ಹಿಜಾಬ್ ನಿಷೇಧ ಆದೇಶ ಹಿಂಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಸಿಎಂ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಸಚಿವರು, ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನು ನಾನು ಸ್ವಾಗತಿಸುತ್ತೇನೆ. ಅವರು ಹೇಳಿದ್ದರಲ್ಲಿ ತಪ್ಪೇನಿದೆ? ಅವರವರ ಸಮುದಾಯಕ್ಕೆ ಅವರದ್ದೇ ಆದ ಸಂಪ್ರದಾಯವಿರುತ್ತದೆ. ಸಿಎಂ ಹೇಳಿಕೆಯಲ್ಲಿ ಸ್ಪಷ್ಟನೆ ಇದೆ. ಹಿಜಾಬ್ ನಿಷೇಧ ಆದೇಶ ಹಿಂಪಡೆಯುವುದಾಗಿ ಹೇಳಿರುವುದು ಸರಿ ಇದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕೂಡ ಸಿಎಂ ಹೇಳಿಕೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಸಿಎಂ ನಿಲುವೇ ನನ್ನ ನಿಲುವು. ಅವರ ಹೇಳಿಕೆಯೇ ನಮ್ಮ ಹೇಳಿಕೆ. ಯಾವಾಗಲೂ ನಾವು ಸಿಎಂ ಸಿದ್ದರಾಮಯ್ಯ ಹಿಂದೆ ಇರುತ್ತೇವೆ ಎಂದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular