HomeKarnatakaBIG NEWS: ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಗೆ ಹೈಕಮಾಂಡ್ ಬುಲಾವ್; ವರಿಷ್ಠರೊಂದಿಗೆ ಚರ್ಚಿಸಿ ಮುಂದಿನ...

BIG NEWS: ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಗೆ ಹೈಕಮಾಂಡ್ ಬುಲಾವ್; ವರಿಷ್ಠರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಎಂದ ಮಾಜಿ ಸಚಿವ

ಬೆಂಗಳೂರು: ಬಿಜೆಪಿಯ ಕೆಲ ಶಾಸಕರು ಅದರಲ್ಲಿಯೂ ಪ್ರಮುಖವಾಗಿ ಮಾಜಿ ಸಚಿವ ಎಸ್.ಟಿ.ಸೋಮಶೇಖರ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ವಿಚಾರ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿತ್ತು. ಈ ಬೆಳವಣಿಗೆ ನಡುವೆಯೇ ಬಿಜೆಪಿ ವರಿಷ್ಠರು ಎಸ್.ಟಿ ಸೋಮಶೇಖರ್ ಗೆ ಬುಲಾವ್ ನೀಡಿದ್ದಾರೆ.

ಹೈಕಮಾಂಡ್ ಕರೆ ಹಿನ್ನೆಲೆಯಲ್ಲಿ ಶಾಸಕ ಎಸ್.ಟಿ.ಸೋಮಶೇಖರ್ ಆಗಸ್ಟ್ 25ರಂದು ದೆಹಲಿಗೆ ತೆರಳಲಿದ್ದಾರೆ. ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಶಾಸಕರು, ವರಿಷ್ಠರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ವರಿಷ್ಠರು ನಮ್ಮ ಬೇಡಿಕೆಯನ್ನು ಈಡೇರಿಸುವ ವಿಶ್ವಾಸವಿದೆ ಎಂದು ಹೇಳಿದ್ದಾರೆ. ಅಲ್ಲದೇ ನಿನ್ನೆ ಕಾಂಗ್ರೆಸ್ ಗೆ ಸೇರ್ಪಡೆಯಾಗಿರುವ ಬಿಜೆಪಿ ಮುಖಂಡರೂ ವಾಪಸ್ ಬರುತ್ತಾರೆ. ಬಿಬಿಎಂಪಿ ಟಿಕೆಟ್ ಭರವಸೆ ಕೊಟ್ಟರೆ ಅವರು ಬಿಜೆಪಿಗೆ ಮತ್ತೆ ಮರಳುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular