HomeKarnatakaಉಪಚುನಾವಣೆ ಹೊತ್ತಲ್ಲೇ ಹೊಸ ಬಾಂಬ್ ಸಿಡಿಸಿದ ಶಾಸಕ: ಬಿಜೆಪಿಯ 8 ಎಂಎಲ್ಎಗಳು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದ...

ಉಪಚುನಾವಣೆ ಹೊತ್ತಲ್ಲೇ ಹೊಸ ಬಾಂಬ್ ಸಿಡಿಸಿದ ಶಾಸಕ: ಬಿಜೆಪಿಯ 8 ಎಂಎಲ್ಎಗಳು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದ ಎಸ್.ಟಿ.ಸೋಮಶೇಖರ್

ಬೆಂಗಳೂರು: ರಾಜ್ಯದಲ್ಲಿ ಮೂರು ಕ್ಷೇತ್ರಗಳ ಉಪಚುನಾವಣಾ ಅಖಾಡ ರಂಗೇರಿರುವ ಹೊತ್ತಲ್ಲೇ ಬಿಜೆಪಿ ಶಸಕ ಎಸ್.ಟಿ.ಸೋಮಶೇಖರ್ ಹೊಸ ಬಾಂಬ್ ಸಿಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಶೇಖರ್, ಬಿಜೆಪಿಯ 8 ಶಾಸಕರು ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ. ಅದರಲ್ಲಿಯೂ ಬೆಂಗಳೂರಿನ ಇಬ್ಬರು ಶಾಸಕರು ಶೀಘ್ರದಲ್ಲೇ ಕಾಂಗ್ರೆಸ್ ಗೆ ಹೋಗಲಿದ್ದಾರೆ ಎಂದು ತಿಳಿಸಿದ್ದಾರೆ.

ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಿ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧೆ ನಡೆಸಿದ್ದಾರೆ. ಇದೇ ವೇಳೆ ಬಿಜೆಪಿಯ ಇನ್ನೂ 8 ಶಾಸಕರು ಕಾಂಗ್ರೆಸ್ ಗೆ ಸೇರಲಿದ್ದಾರೆ. ಬಿಜೆಪಿಯವರು ನನ್ನ ಮೇಲೆ ಶಿಸ್ತುಕ್ರಮ ಜರುಗಿಸಿದರೂ ನನಗೆ ಬೇಸರವಿಲ್ಲ. ಅಶೋಕ್ ಮಾತಿಗೆ ಬೆಲೆಕೊಡಲಾಗದು. ಸಧ್ಯದಲ್ಲೇ ಇನ್ನೂ 8 ಜನ ಕಾಂಗ್ರೆಸ್ ಸೇರಲಿದ್ದಾರೆ ನೋಡ್ತಾ ಇರಿ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಡಾ ಹಗರಣ, ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ವಿಪಕ್ಷ ಬಿಜೆಪಿ ನಾಯಕರು ಹೇಳಿಕೆ ನೀಡುತ್ತಿರುವ ಸಂದರ್ಭದಲ್ಲೇ ಸ್ವತಃ ಬಿಜೆಪಿ ಶಾಸಕ ಸೋಮಶೇಖರ್, ಈ ಹೇಳೆಕೆ ನೀಡಿರುವುದು ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.

 

For Latest News Updates, Join Our Whatsapp Community🚩
RELATED ARTICLES

Most Popular